ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗುಡ್‌ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!

By Suvarna News  |  First Published Oct 11, 2020, 2:04 PM IST

ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ ರಾಜ್ಯದ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ.


ಬೆಂಗಳೂರು, (ಅ.11): ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12ರಿಂದ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ.

"

Latest Videos

undefined

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.

'ವಿದ್ಯಾಗಮ' ಯೋಜನೆ: ಕೊನೆಗೂ ಮಹತ್ವದ ನಿರ್ಧಾರ ಕೈಗೊಂಡ ಸಚಿವ ಸುರೇಶ್ ಕುಮಾರ್

ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂದು ತಿಳಿಸಿದ್ದಾರೆ.

ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ pic.twitter.com/uigK7gHhQo

— CM of Karnataka (@CMofKarnataka)
click me!