ಬಲಿಷ್ಠ ಭಾರತಕ್ಕಾಗಿ ಯುವಕರು ಕೈ ಜೋಡಿಸಿ: ರಾಜ್ಯಪಾಲ ಗೆಹ್ಲೋಟ್‌

By Kannadaprabha News  |  First Published Jun 6, 2023, 10:30 PM IST

ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಮಹತ್ತರ ಬದಲಾವಣೆಗಳಾಗಿವೆ. ವಿದ್ಯಾರ್ಥಿಗಳು ಎನ್‌ಇ.ಪಿ ಶಿಕ್ಷಣ ನೀತಿಗೆ ಹೊಂದಿಕೊಳ್ಳುತ್ತಿದ್ದಾರೆ. ಬರುವ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲು ಎನ್‌.ಇ.ಪಿ ವಿದ್ಯಾರ್ಥಿಗಳಿಗೆ ಸಹಾಯಕವಾಗಲಿದೆ: ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌


ಬೆಳಗಾವಿ(ಜೂ.06): ಮುಂಬರುವ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲಿದೆ. ಇದಕ್ಕೆ ಪೂರಕವಾಗಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ದೇಶದ ಯುವ ಜನತೆ ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರು ಕರೆ ನೀಡಿದರು.

ನಗರದ ಕೆಎಲ್‌ಇ ಕನ್ವೆನ್ಷನ್‌ ಸೆಂಟರ್‌ ಹಾಲ್‌ನಲ್ಲಿ ಸೋಮವಾರ ನಡೆದ ಕೆಎಲ್‌ಇ ವಿಶ್ವ ವಿದ್ಯಾಲಯದ 13ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಮಹತ್ತರ ಬದಲಾವಣೆಗಳಾಗಿವೆ. ವಿದ್ಯಾರ್ಥಿಗಳು ಎನ್‌ಇ.ಪಿ ಶಿಕ್ಷಣ ನೀತಿಗೆ ಹೊಂದಿಕೊಳ್ಳುತ್ತಿದ್ದಾರೆ. ಬರುವ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲು ಎನ್‌.ಇ.ಪಿ ವಿದ್ಯಾರ್ಥಿಗಳಿಗೆ ಸಹಾಯಕವಾಗಲಿದೆ ಎಂದು ಹೇಳಿದರು.
ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ, ಕೆಎಲ್‌ಇ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ಅನೇಕ ವಿದ್ಯಾರ್ಥಿಗಳು ದೇಶ, ವಿದೇಶಗಳಲ್ಲಿ ವೃತ್ತಿ ಜೀವನ ಆರಂಭಿಸಿ, ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೇವಲ ಪದವಿ ಪಡೆಯುವುದು ಮಾತ್ರವಲ್ಲದೇ, ಪದವಿಯ ನಂತರ ಉತ್ತಮ ಜೀವನ ರೂಪಿಸಿಕೊಳ್ಳುವ ಮೂಲಕ ದೇಶಕ್ಕೆ ನಿಮ್ಮ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Latest Videos

undefined

ಚಿತ್ರದುರ್ಗ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ಲಾನ್ ರೂಪಿಸಿ: ಅಧಿಕಾರಿಗಳಿಗೆ ಕೇಂದ್ರ ಸಚಿವ ನಾರಾಯಣಸ್ವಾಮಿ ಖಡಕ್ ವಾರ್ನ್

ಶ್ರೇಷ್ಠ ಭಾರತ ನಿರ್ಮಾಣಕ್ಕೆ ಯುವಕರು ಕೈಜೋಡಿಸಿ: 

ಶ್ರೇಷ್ಠ ಭಾರತ ನಿರ್ಮಾಣದಲ್ಲಿ ವಿಧ್ಯಾರ್ಥಿಗಳು, ಯುವಕರ ಪಾತ್ರ ಬಹು ಮುಖ್ಯವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವಕರು ಕೈ ಜೋಡಿಸಬೇಕು ಎಂದು ಅವರು ಸಲಹೆ ನೀಡಿದರು.
ಮುಂಬರುವ 25 ವರ್ಷಗಳಲ್ಲಿ ಭಾರತ ಸ್ವಾತಂತ್ರ್ಯ ಪಡೆದು 100 ವರ್ಷ ಪೂರೈಸಲಿದೆ. ಮಹಾತ್ಮ ಗಾಂಧೀಜಿ ಅವರ ಕನಸಿನಂತೆ ಉತ್ತಮ ಸಮಾಜಕ್ಕೆ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕಿದೆ. ಅದೇ ರೀತಿಯಲ್ಲಿ ಪ್ರಕೃತಿ ಸಂರಕ್ಷಣೆ ಕೂಡ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕೆಎಲ್‌ಇ ಸಂಸ್ಥೆ ವಿವಿಧ ವೈದ್ಯಕೀಯ ಸೌಲಭ್ಯ ನೀಡುವುದರ ಮೂಲಕ ಕೆಳ ವರ್ಗದ ಜನರಿಗೆ ಸಾಕಷ್ಟುಸಹಾಯ ಮಾಡುತ್ತಾ ಬಂದಿದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಕೆಎಲ್‌ಇ ಸಂಸ್ಥೆಯನ್ನು ಅನೇಕ ಬಾರಿ ಗುರುತಿಸಿ, ವಿವಿಧ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಕೆಎಲ್‌ಇ ಸಂಸ್ಥೆ ವಿಶ್ವದಲ್ಲೇ ಹೆಸರುವಾಸಿಯಾಗಿದೆ ಎಂದು ಗೆಹ್ಲೋಚ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿತಿನ ಗಂಗಾನೆ, ವರದಿಯಲ್ಲಿ ವಾಚಿಸುತ್ತ ಜೆಎನ್‌ ವೈದ್ಯಕೀಯ ಮಹಾವಿದ್ಯಾಲಯವು ಸುಧಾರಿತ ಸಿಮ್ಯುಲೇಶನ್‌ ತರಬೇತಿ ಕೇಂದ್ರ ಹೊಂದಿದ್ದು, ದೇಶದಲ್ಲೇ ಅತ್ಯುತ್ತಮವಾಗಿದೆ. ಅಲ್ಲದೆ ಉತ್ತರ ಕರ್ನಾಟಕದಲ್ಲಿ ಪ್ರಥಮ. ಅತ್ಯಾಧುನಿಕ ಸಿಮ್ಯುಲೇಟರ್‌ಗಳು ವಿದ್ಯಾರ್ಥಿಗಳಿಗೆ ನೈಜ-ಸಮಯದ ಕಾರ್ಯಾಚರಣೆಯ ಅನುಭವಗಳನ್ನು ನೀಡುತ್ತವೆ. ರೋಗಿಗಳ ಸುರಕ್ಷತೆಗೆ ಧಕ್ಕೆಯಾಗದಂತೆ ಅವರ ಕೌಶಲ್ಯಗಳನ್ನು ಹೆಚ್ಚಿಸುತ್ತವೆ. ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮುಕ್ತ ದೂರಶಿಕ್ಷಣದಲ್ಲಿ ತೊಡಗಲಿದೆ ಎಂದು ಹೇಳಿದರು.

ಪಠ್ಯಪುಸ್ತಕ ಪುನರ್‌ ಪರಿಷ್ಕರಣೆ: ಬರಗೂರು ರಾಮಚಂದ್ರಪ್ಪ ಜತೆ ಸಚಿವ ಮಧು ಬಂಗಾರಪ್ಪ ಚರ್ಚೆ

ಪದವಿ ಪ್ರದಾನ

ನಿಪ್ಪಾಣಿ ತಾಲೂಕಿನ ಬೆನ್ನಾಡಿ ಗ್ರಾಮದ ಕೃಷಿ ಕುಟುಂಬದ ಡಾ. ಅನುಜಾ ಜನವಾಡೆ ಅವರು ಆಯುರ್ವೇದ ವೈದ್ಯಶಾಸ್ತದಲ್ಲಿ (ಬಿಎಎಂಎಸ್‌) 3 ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಒಟ್ಟು 23 ಚಿನ್ನದ ಪದಕಗಳಲ್ಲಿ 19 ವೈದ್ಯ ವಿದ್ಯಾರ್ಥಿನಿಯರೇ ಪಡೆದುಕೊಂಡಿದ್ದಾರೆ. 7 ಪಿಎಚ್‌ಡಿ, 9 ಪೋಸ್ಟ್‌ ಡಾಕ್ಟರಲ್‌ , 23 ಚಿನ್ನದ ಪದಕಗಳು ಸೇರಿದಂತೆ ಆರೋಗ್ಯ ವಿಜ್ಞಾನದ ವಿವಿಧ ವಿಭಾಗಗಳಲ್ಲಿ ಒಟ್ಟು 1451 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರಮಾಣ ಪತ್ರ ನೀಡಲಾಯಿತು. 445 ಸ್ನಾತಕೋತ್ತರ ಪದವಿ, 976 ಪದವಿ, 02 ಸ್ನಾತಕೋತ್ತರ ಡಿಪ್ಲೊಮಾ, 7 ಫೆಲೋಶಿಪ ಮತ್ತು ಪ್ರಮಾಣ ಪತ್ರ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪ್ರಭಾಕರ ಕೋರೆ ವಹಿಸಿದ್ದರು. ಕುಲಸಚಿವ ಡಾ.ವಿ.ಎ.ಕೋಠಿವಾಲೆ, ಪರೀಕ್ಷಾ ನಿಯಂತ್ರಕರಾದ ಡಾ. ಜ್ಯೋತಿ ಎಂ. ನಾಗಮೋತಿ ಸೇರಿದಂತೆ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

click me!