ಮೊದಲ ದಿನ 11 ನಾಮಪತ್ರ ಸಲ್ಲಿಕೆ

Published : Mar 20, 2019, 03:48 PM IST
ಮೊದಲ ದಿನ 11 ನಾಮಪತ್ರ ಸಲ್ಲಿಕೆ

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಕಸರತ್ತು ವಿವಿಧ ಪಕ್ಷಗಳಲ್ಲಿ ಜೋರಾಗಿದೆ. ಇನ್ನು ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು,  ಮೊದಲ ದಿನ 11 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. 

ಬೆಂಗಳೂರು :  ಲೋಕಸಭೆ ಚುನಾವಣಾ ಕಣ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಮೊದಲ ದಿನ ನಾಲ್ಕು ಕ್ಷೇತ್ರದಲ್ಲಿ ಆರು ಅಭ್ಯರ್ಥಿಗಳು 11 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ 1, ಮಂಡ್ಯ ಕ್ಷೇತ್ರದಲ್ಲಿ 3, ಮೈಸೂರು ಕ್ಷೇತ್ರದಲ್ಲಿ ಆರು ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಒಂದು ಉಮೇದುವಾರಿಕೆ ಸಲ್ಲಿಕೆಯಾಗಿವೆ. ಆರು ಅಭ್ಯರ್ಥಿಗಳು 11 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 

ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾ.26ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾ.29ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಏ.18ರಂದು ಮತದಾನ ನಡೆಯಲಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

PREV
click me!

Recommended Stories

ಶೃಂಗೇರಿಗೆ ಲಗ್ಗೆ ಇಟ್ಟ ಲಕ್ಷಾಂತರ ಮಿಡತೆ ಹಿಂಡು!
233 ಸಂಸದರ ವಿರುದ್ಧ ಕ್ರಿಮಿನಲ್‌ ಕೇಸ್‌!