'ಟಿಎಂಸಿ 100 ಶಾಸಕರು ಶೀಘ್ರದಲ್ಲಿ ಬಿಜೆಪಿಗೆ'

Published : Mar 28, 2019, 12:47 PM IST
'ಟಿಎಂಸಿ 100 ಶಾಸಕರು ಶೀಘ್ರದಲ್ಲಿ ಬಿಜೆಪಿಗೆ'

ಸಾರಾಂಶ

'ಶೀಘ್ರದಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದ 100 ಶಾಸಕರು ಬಿಜೆಪಿಗೆ'| ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ ಬಿಜೆಪಿಗೆ ಸೇರ್ಪಡೆಗೊಂಡ ಶಾಸಕ ಅರ್ಜುನ್ ಸಿಂಗ್ ಹೇಳಿಕೆ

ಕೋಲ್ಕತ್ತಾ[ಮಾ.28]: ಇತ್ತೀಚೆಗಷ್ಟೇ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾದ ಶಾಸಕ ಅರ್ಜುನ್ ಸಿಂಗ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ 100 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಹಾಗೂ ಅತಿ ಸೀಘ್ರದಲ್ಲೇ ಅವರೆಲ್ಲರೂ ಕಮಲ ಪಾಳಯಕ್ಕೆ ಸೇರ್ಪಡೆಗೊಳ್ಳುತ್ತಾರೆ ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದಾರೆ. 

ಹಿಂದಿನ ಚುನಾವಣೆಗಳಲ್ಲಿ ಕೋಲ್ಕತ್ತಾದ ದಾಮನ್ ನಿಂದ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದ ಅರ್ಜುನ್ ಸಿಂಗ್ ರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಬೈರಕ್ಪುರ್ ಕ್ಷೇತ್ರದಿಂದ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ಈ ಸಂದರ್ಭದಲ್ಲಿ ಮಾತನಾಡಿರುವ ಅರ್ಜುನ್ ಸಿಂಗ್ ಲೋಕಸಭಾ ಚುನಾವಣೆಗೂ ಮೊದಲು ಟಿಎಂಸಿಯ ಕೆಲ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ. ಇನ್ನು ಕೆಲವರು ಚುನಾವಣೆ ಬಳಿಕ ಕಮಲ ಪಾಳಯಕ್ಕೆ ಬರಲಿದ್ದಾರೆ. ಈಗಾಗಲೇ ಹಲವು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಸಚಿವರೂ ಬಿಜೆಪಿಗೆ ಸೇರ್ಪಡೆಯಾಗುತ್ತಾರಾ? ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ ಅರ್ಜುನ್ ಸಿಂಗ್ 'ಈ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಯಾಕೆಂದರೆ ಈಗಲೇ ನಾನು ಹೌದು ಎಂದು ಹೇಳಿದರೆ ಆ ಸಚಿವರನ್ನು ಅಮಾನತ್ತುಗೊಳಿಸುವ ಸಾಧ್ಯತೆಗಳಿವೆ' ಎಂದಿದ್ದಾರೆ.

ಆದರೆ ಈ ಮಾತುಗಳನ್ನು ಅಲ್ಲಗಳೆದಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರರು 'ಅರ್ಜುನ್ ಸಿಂಗ್ ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ನಮ್ಮ ಶಾಸಕರು ಅವರನ್ನು ಅನುಕರಿಸುತ್ತಿರುವುದನ್ನು ನೀವು ನೋಡಿದ್ದೀರಾ' ಎಂದು ಪ್ರಶ್ನಿಸಿದ್ದಾರೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!