ಪ್ರಧಾನಿ ಮೋದಿಗೆ ಮಾನನಷ್ಟ ಮೊಕದ್ದಮೆ ನೋಟಿಸ್ ಕೊಟ್ಟ ದೀದಿ ಸಂಬಂಧಿ!

By Web DeskFirst Published May 18, 2019, 9:52 PM IST
Highlights

ಪ್ರಧಾನಿ ಮೋದಿಗೆ ಮಾನನಷ್ಟ ಮೊಕದ್ದಮೆ ನೋಟಿಸ್| 36 ಗಂಟೆಗಳಲ್ಲಿ ಬಹಿರಂಗ ಕ್ಷಮೆಗೆ ಆಗ್ರಹ| ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್ ಬ್ಯಾನರ್ಜಿ| ಬುಧವಾರ ಪ.ಬಂಗಾಳದ ಡೈಮಂಡ್ ಹಾರ್ಬರ್‌ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿ ಮಾತು| ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ ಎಂದ ಅಭಿಷೇಕ್ ಬ್ಯಾನರ್ಜಿ| ಬಂಗಾಳದಲ್ಲಿ ಭುವಾ-ಭತೀಜಾ ದರ್ಬಾರ್ ನಡೆಯುತ್ತಿದೆ ಎಂದಿದ್ದ ಮೋದಿ| 

ಕೋಲ್ಕತ್ತಾ(ಮೇ.18): ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿ ಹಾಗೂ ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿದ್ದಾರೆ.

ಬುಧವಾರ ಪ.ಬಂಗಾಳದ ಡೈಮಂಡ್ ಹಾರ್ಬರ್‌ನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದ ಪ್ರಧಾನಿ ಮೋದಿ, ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

TMC leader & nephew of West Bengal CM Mamata Banerjee, Abhishek Banerjee through his lawyer sends a defamation notice to Prime Minister Narendra Modi for alleged derogatory remarks made against him in a public rally on 15 May, held in Diamond Harbour in West Bengal. (file pic) pic.twitter.com/3kYEcyiQBu

— ANI (@ANI)

36 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ ತಮಗೆ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಭಿಷೇಕ್ ಬ್ಯಾನರ್ಜಿ ಎಚ್ಚರಿಕೆ ಕೂಡ ನೀಡಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ ಬಂಗಾಳದಲ್ಲಿ ಭುವಾ-ಭತೀಜಾ ದರ್ಬಾರ್ ನಡೆಯುತ್ತಿದೆ ಎಂದು ಹರಿಹಾಯ್ದಿದ್ದರು. ಇದೇ ವಿಚಾರವಾಗಿ ಅಭಿಷೇಕ್ ಬ್ಯಾನರ್ಜಿ ಪ್ರಧಾನಿ ಮೋದಿ ಅವರಿಗೆ ಮಾನನಷ್ಟ ನೋಟಿಸ್ ಜಾರಿ ಮಾಡಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

click me!