
ನವದೆಹಲಿ(ಏ.23): ಬಾಲಿವುಡ್ ನಟ ಸನ್ನಿ ಡಿಯೋಲ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್ ಸಮ್ಮುಖದಲ್ಲಿ ಸನ್ನಿ ಡಿಯೋಲ್ ಬಿಜೆಪಿಗೆ ಸೇರ್ಪಡೆಗೊಂಡರು.
ಈ ವೇಳೆ ಮಾತನಾಡಿದ ಸನ್ನಿ ಡಿಯೋಲ್, ತಮ್ಮ ತಂದೆ ನಟ, ಮಾಜಿ ಸಂಸದ ಧರ್ಮೇಂದ್ರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬೆಂಬಲಿಸಿದಂತೆ ತಾವೂ ಕೂಡ ಪ್ರಧಾನಿ ಮೋದಿ ಅವರನ್ನು ಬೆಂಬಲಸಿವುದಾಗಿ ಹೇಳಿದ್ದಾರೆ.
ನಿನ್ನೆಯಷ್ಟೇ (ಏ.22) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಸನ್ನಿ ಡಿಯೋಲ್, ಇಂದು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ಪಂಜಾಬ್‌ನ ಗುರುದಾಸ್‍ಪೂರ್ ಲೋಕಸಭೆ ಕ್ಷೇತ್ರದಿಂದ ಸನ್ನಿ ಡಿಯೋಲ್ ಸ್ಪರ್ಧಿಸುವ ಸಾಧ್ಯತೆಗಳಿವೆ.