ಮತ್ತೆ ಆಂಜನೇಯಸ್ವಾಮಿ ಮೊರೆ ಹೋದ ಅನಿತಾ ಕುಮಾರಸ್ವಾಮಿ!

Published : Mar 13, 2019, 11:30 AM IST
ಮತ್ತೆ ಆಂಜನೇಯಸ್ವಾಮಿ ಮೊರೆ ಹೋದ ಅನಿತಾ ಕುಮಾರಸ್ವಾಮಿ!

ಸಾರಾಂಶ

 ಮಂಡ್ಯ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿರುವ ನಿಖಿಲ್‌ ಕುಮಾರಸ್ವಾಮಿ|ಮಗನ ಗೆಲುವಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಪಟ್ಟಣದ ಹೊಳೆ ಆಂಜನೇಯಸ್ವಾಮಿಗೆ ಹರಕೆ 

ಮದ್ದೂರು[ಮಾ.13]: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿರುವ ಪುತ್ರ ನಿಖಿಲ್‌ ಕುಮಾರಸ್ವಾಮಿ ಗೆಲುವಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಪಟ್ಟಣದ ಹೊಳೆ ಆಂಜನೇಯಸ್ವಾಮಿಗೆ ಹರಕೆ ಹೊತ್ತಿದ್ದು, ಅದರಂತೆ ಮಂಗಳವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಮೂರು ವಾರಗಳ ಹಿಂದೆ ಹೊಳೆ ಆಂಜನೇಯಸ್ವಾಮಿಗೆ ಒಂದೂಕಾಲು ರೂಪಾಯಿ ಹರಕೆ ಕಟ್ಟಿದ್ದರು. ಸತತವಾಗಿ ಐದು ಮಂಗಳವಾರ ದೇಗುಲಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಸುವುದೆಂಬ ನಂಬಿಕೆಯೊಂದಿಗೆ ಅನಿತಾ ಅವರು ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಅದರಂತೆ ಮೂರನೇ ಮಂಗಳವಾರವೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಸ್ಥಾನಕ್ಕೆ ಭೇಟಿ ನೀಡುವುದು, ದೇವರಿಗೆ ಪೂಜೆ ಸಲ್ಲಿಸುವುದು ನನ್ನ ವೈಯಕ್ತಿಕ ವಿಚಾರ. ಇಲ್ಲಿ ನಾನು ಯಾವುದೇ ರಾಜಕಾರಣವನ್ನು ಮಾತನಾಡುವುದಿಲ್ಲ. ನನಗೂ ಖಾಸಗಿ ಜೀವನವಿದೆ. ಅದನ್ನು ಪ್ರಶ್ನಿಸಬೇಡಿ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!