
ಬೆಂಗಳೂರು[ಮಾ. 25] ಬೆಂಗಳೂರು ದಕ್ಷಿಣಕ್ಕೆ ಅಚ್ಚರಿ ಅಭ್ಯರ್ಥಿಯಾಗಿ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಕಣಕ್ಕೆ ಇಳಿಯುವುದು ಪಕ್ಕಾ ಆಗಿದೆ. ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ರವಿ ಸುಬ್ರಹ್ಮಣ್ಯ ಮತ್ತು ಕಾಂಗ್ರೆಸ್ ನ ಬಿ.ಕೆ. ಹರಿಪ್ರಸಾದ್ ನಡುವೆ ನೇರ ಹಣಾಹಣಿ ನಡೆಯಲಿದೆ.
ಬೆಂಗ್ಳೂರು ದಕ್ಷಿಣ ಟಿಕೆಟ್: ಚರ್ಚೆಗೆ ಗ್ರಾಸವಾಯ್ತು ತೇಜಸ್ವಿನಿ ಅನಂತ ಕುಮಾರ್ ಟ್ವೀಟ್
ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಯಾರನ್ನು ಕಣಕ್ಕೆ ಇಳಿಸುತ್ತದೆ ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಈಗ ಅಂತಿಮವಾಗಿ ರವಿ ಸುಬ್ರಹ್ಮಣ್ಯ ಅವರ ಹೆಸರನ್ನು ಫೈನಲ್ ಮಾಡಲಾಗಿದ್ದು ಅಚ್ಚರಿ ಆಯ್ಕೆ ಎಂದು ಹೇಳಲಾಗಿದೆ.