ವಿಶೇಷ ಸ್ಥಾನಮಾನ ಕೊಡುವ ಯಾರಿಗಾದರೂ ಬೆಂಬಲ: ಬಿಜೆಡಿ!

Published : May 18, 2019, 03:19 PM IST
ವಿಶೇಷ ಸ್ಥಾನಮಾನ ಕೊಡುವ ಯಾರಿಗಾದರೂ ಬೆಂಬಲ: ಬಿಜೆಡಿ!

ಸಾರಾಂಶ

ಲೋಕಸಭೆ ಫಲಿತಾಂಶಕ್ಕೂ ಮುನ್ನವೇ ಮೈತ್ರಿಕೂಟದ ಪೊಲಿಟಿಕ್ಸ್ ಆರಂಭ| ಯಾವ ಮೈತ್ರಿಕೂಟ ಸೇರುವುದು ಎಂಬ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು| ‘ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಪಕ್ಷಕ್ಕೆ ಬೆಂಬಲ’| ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಣೆ| ವಿಶೇಷ ಸ್ಥಾನಮಾನದ ಭರವಸೆ ನೀಡುವ ಮೈತ್ರಿಕೂಟಕ್ಕೆ ಬೆಂಬಲ ಎಂದ ಬಿಜೆಡಿ|

ಭುವನೇಶ್ವರ್(ಮೇ.18): ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈ ಮಧ್ಯೆ ಹೊಸ ಸರ್ಕಾರ ರಚನೆಯ ಸಾಧ್ಯತೆಗಳ ಕುರಿತು ಎಲ್ಲಾ ರಾಜಕೀಯ ಪಕ್ಷಗಳು ತಮ್ಮದೇ ಆದ ವಾದ ಮಂಡಿಸುತ್ತಿದ್ದು, ಕೆಲವು ರಾಜಕೀಯ ಪಕ್ಷಗಳು ಯಾವ ಮೈತ್ರಿಕೂಟ ಸೇರಬಹುದು ಎಂಬ ಲೆಕ್ಕಾಚಾರದಲ್ಲಿ ನಿರತವಾಗಿವೆ.

ಅದರಂತೆ ಒಡಿಶಾ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಘೋಷಿಸುವ ಯಾವುದೇ ಪಕ್ಷಕ್ಕೆ ತಮ್ಮ ಬೆಂಬಲ ಇರಲಿದೆ ಎಂದು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ. ಚುನಾವಣೆಗೂ ಮೊದಲು ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಸಮಾನ ಅಂತರ ಕಾಯ್ದುಕೊಂಡಿದ್ದ ಬಿಜೆಡಿ, ಇದೀಗ ವಿಶೇಷ ಸ್ಥಾನಮಾನದ ಬೇಡಿಕೆಯೊಂದಿಗೆ ಮೈತ್ರಿಯ ಸಾಧ್ಯತೆ ಕುರಿತು ಸಂದೇಶ ಕಳುಹಿಸಿದೆ.

ಒಡಿಶಾಗೆ ವಿಶೇಷ ಸ್ಥಾನಮಾನ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ಈ ಬೇಡಿಕೆಯನ್ನು ಈಡೇರಿಸುವ ಯಾವುದೇ ಪಕ್ಷಕ್ಕೆ ಅಥವಾ ಮೈತ್ರಿಕೂಟಕ್ಕೆ ತಮ್ಮ ಬೆಂಬಲ ಇರಲಿದೆ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!