ಕರ್ನಾಟಕದ 3 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

Published : Mar 29, 2019, 02:10 PM ISTUpdated : Mar 29, 2019, 03:39 PM IST
ಕರ್ನಾಟಕದ 3 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಸಾರಾಂಶ

ಬಾಕಿ ಉಳಿದಿದ್ದ ಮೂರು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರಿಂದ ಎಲ್ಲ 28 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಂತಾಗಿದೆ. 

ಬೆಂಗಳೂರು, (ಮಾ.29): ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ರಾಜ್ಯದ ಮೂರು ಕ್ಷೇತ್ರಗಳ ಅಭ್ಯರ್ಥಿಗಳು ಫೈನಲ್​ ಆಗಿದ್ದಾರೆ. 

ಚಿಕ್ಕೋಡಿ-ಸದಲಗಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅಣ್ಣಾ ಸಾಹೇಬ್ ಜೊಲ್ಲೆ ಕಣಕ್ಕಿಳಿಯಲಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಉಮೇಶ್ ಕತ್ತಿ ಸೋದರ ರಮೇಶ್ ಕತ್ತಿ ಪ್ರಬಲ ಆಕಾಂಕ್ಷಿಯಾಗಿದ್ದರು. 

ರಮೇಶ್ ಕತ್ತಿ ಮಾತ್ರವಲ್ಲದೇ ಬಿಜೆಪಿ ಮುಖಂಡ ಪ್ರಭಾಕರ ಕೋರೆ ಕೂಡ ಈ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಆದ್ರೆ, ಅಚ್ಚರಿಯ ಬೆಳವಣಿಗೆಯಲ್ಲಿ ಕಳೆದ ವಿಧಾನ ಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರ ಪತಿ ಅಣ್ಣಾ ಸಾಹೇಬ್ ಜೊಲ್ಲೆಗೆ ಟಿಕೆಟ್ ಸಿಕ್ಕಿದೆ. 

ಇನ್ನು  ರಾಯಚೂರು(ಮೀಸಲು) ಕ್ಷೇತ್ರದಿಂದ ರಾಜಾ ಅಮರೇಶ್​ ನಾಯಕ್ ಸ್ಪರ್ಧಿಸಲಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಕರಡಿ ಸಂಗಣ್ಣಗೆ ಟಿಕೆಟ್​ ಫೈನಲ್ ಆಗಿದೆ.

ಈ ಮೂಲಕ 28 ಕ್ಷೇತ್ರಗಳಿಗೆ ಬಿಜೆಪಿಯ ಅಭ್ಯರ್ಥಿಗಳು ಫೈನಲ್ ಆಗಿದೆ. ಒಟ್ಟು 7 ಹಂತದಲ್ಲಿ ದೇಶಾದ್ಯಂತ ನಡೆಯಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ ಏ.23 ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಮೇ. 23ಕ್ಕೆ ಮತದಾನ ಎಣಿಕೆ ನಡೆಯಲಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!