
ನವದೆಹಲಿ(ಏ.22): 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಪ್ರಗ್ಯಾ ಸಿಂಗ್ ಥಾಕೂರ್ ಅವರು ತಮ್ಮ ಮೂವರು ಬೆಂಬಲಿಗರು ಹಾಗೂ ವಕೀಲರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.
ಅತ್ತ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮನೋಜ್ ತಿವಾರಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ಚುನಾವಣಾ ಆಯೋಗದ ಕಚೇರಿಗೆ ಆಗಮಸಿದ ತಿವಾರಿ, ತಮ್ಮ ನಾಮಪತ್ರ ಸಲ್ಲಿಸಿದರು.
ಈ ವೇಳೆ ಜನಪ್ರಿಯ ಗಾಯಕಿ ಸಪ್ನಾ ಚೌಧರಿ ಕೂಡ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಸಪ್ನಾ ಚೌಧರಿ, ಮನೋಜ್ ತಿವಾರಿ ನನ್ನ ಸ್ನೇಹಿತರಾದ ಕಾರಣ ಅವರಿಗೆ ಬೆಂಬಲ ಕೋರಿದ್ದೇನೆ ಹೊರತು ಬಿಜೆಪಿ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು.