ಟೈಮ್ ಸಿಕ್ರೆ ಸುಮಲತಾ ಪರ ಪ್ರಚಾರಕ್ಕೆ ಹೋಗ್ತೇನೆ ಎಂದ BJP ಶಾಸಕ

Published : Mar 19, 2019, 04:34 PM IST
ಟೈಮ್ ಸಿಕ್ರೆ ಸುಮಲತಾ ಪರ ಪ್ರಚಾರಕ್ಕೆ ಹೋಗ್ತೇನೆ ಎಂದ BJP ಶಾಸಕ

ಸಾರಾಂಶ

ಈಗಾಗಲೇ ಸುಮಲತಾ ಅಂಬರೀಶ್ ಅವರು ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನ ಕೈಗೊಡಿದ್ದಾರೆ. ಇದಕ್ಕೆ ಸ್ಯಾಂಡಲ್ ವುಡ್‌ನ ಸ್ಟಾರ್ ನಟರಾದ ದರ್ಶನ್, ಯಶ್ ಸೇರಿದಂತೆ ಹಲವು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಬಿಜೆಪಿ ಶಾಸಕ ಸಹ ಸುಮಲತಾ ಪರ ಪ್ರಚಾರ ಮಾಡು ಮಾತುಗಳನ್ನಾಡಿದ್ದು, ದಳಪತಿಗಳಿಗೆ ನಿದ್ದೆಗೆಡಿಸಿದೆ.

ಶಿವಮೊಗ್ಗ, (ಮಾ.19): ಮಂಡ್ಯ  ಅಖಾಡ ಈ ಬಾರಿಯ ಲೋಕಸಭಾ ಚುನಾವಣೆಯ ಕೇಂದ್ರ ಬಿಂದುವಾಗಿದೆ. ಸುಮಲತಾ ಅಂಬರೀಶ್ ಹಾಗೂ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ನಡುವೆ ನೇರ ಹಣಾಹಣಿ ನಡೆಯಲಿದೆ. 

ಇದ್ರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಇದರ ನಡುವೆಯೇ ಸುಮಲತಾ ಅವರು ಬಿಜೆಪಿ ಸೇರಬೇಕು ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿದೆ.

ಮಲ್ಟಿ ಸ್ಟಾರ್ ಸಿನಿಮಾ ಆಗಿರುವ ಮಂಡ್ಯ ಲೋಕಸಭಾ ಕ್ಷೇತ್ರ!

ಆದ್ರೆ ಸುಮಲತಾ ಅವರು ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಕೈಗೊಂಡಿದ್ದಾರೆ, ಇತ್ತ ಬಿಜೆಪಿ ತನ್ನ ಅಭ್ಯರ್ಥಿಯನ್ನ ಕಣಕ್ಕಿಳಿಸಬೇಕೋ...? ಬೇಡವೋ..? ಎನ್ನುವ ಚಿಂತನೆ ನಡೆಸಿದೆ. ಹೀಗಿರುವಾಗ ಸೊರಬ ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ ಅವರು ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಪತ್ರ ಬರೆದು ಮಂಡ್ಯ ಜನರೊಂದಿಗೆ ಭಾವನಾತ್ಮಕವಾಗಿ ಬೆಸೆದುಕೊಂಡ ಸುಮಲತಾ

ಶಿವಮೊಗ್ಗದಲ್ಲಿಂದ ಮಾತನಾಡಿದ ಅವರು, ಮಂಡ್ಯದಲ್ಲಿ ಸುಮಲತಾ ಅಂಬರೀಶ್  ತೆಗೆದುಕೊಂಡ ನಿರ್ಧಾರ ಸೂಕ್ತವಾಗಿದೆ. ಮಂಡ್ಯದಲ್ಲಿ ಸುಮಲತಾ ಪರ ಅವಕಾಶ ಸಿಕ್ಕರೆ ಚುನಾವಣಾ ಪ್ರಚಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. 

 ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಿಲ್ಲ. ಆದರೂ ಕುಮಾರ ಬಂಗಾರಪ್ಪ ಅವರ ಈ ಹೇಳಿಕೆ ದಳಪತಿಗಳಿಗೆ ನಿದ್ದೆಗೆಡಿಸಿದಂತೂ ಸತ್ಯ. 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!