ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ವಾರಾಣಸಿಯಿಂದ ಮೋದಿ!

Published : Mar 21, 2019, 07:54 PM IST
ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ವಾರಾಣಸಿಯಿಂದ ಮೋದಿ!

ಸಾರಾಂಶ

ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂಂದ್ರ ಮೋದಿ ಸೇರಿದಂತೆ ಹಲವು ಪ್ರಮುಖ ನಾಯಕರ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಒಟ್ಟು 182 ಅಭ್ಯರ್ಥಿಗಳ ಹೆಸರಿದೆ.

ನವದೆಹಲಿ(ಮಾ.21): ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂಂದ್ರ ಮೋದಿ ಸೇರಿದಂತೆ ಹಲವು ಪ್ರಮುಖ ನಾಯಕರ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಒಟ್ಟು 182 ಅಭ್ಯರ್ಥಿಗಳ ಹೆಸರಿದೆ.

ನರೇಂದ್ರ ಮೋದಿ ಈ ಬಾರಿಯೂ ವಾರಾಣಸಿಯಿಂದ ಸ್ಪರ್ಧಿಸಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಗುಜರಾತ್ ನ ಗಾಂಧಿ ನಗರದಿಂದ ಸ್ಪರ್ಧೆ ಮಾಡಲಿದ್ದಾರೆ.

ಇನ್ನುಳಿದಂತೆ ಲಕ್ನೋದಿಂದ ರಾಜನಾಥ್ ಸಿಂಗ್, ಘಾಜಿಯಾಬಾದ್ ಕ್ಷೇತ್ರದಿಂದ ಜನರಲ್ ವಿಕೆ ಸಿಂಗ್, ಉನ್ನಾವೋ ಕ್ಷೇತ್ರದಿಂದ ಸಾಕ್ಷಿ ಮಹಾರಾಜ್, ಮಥುರಾದಿಂದ ಹೇಮಾ ಮಾಲಿನಿ ಸ್ಪರ್ಧೆ ಮಾಡಲಿದ್ದಾರೆ.

ನಿರೀಕ್ಷೆಯಂತೆ ಸ್ಮೃತಿ ಇರಾನಿ ಅಮೇಥಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದು, ನಿತಿನ್ ಗಡ್ಕರಿ ನಾಗ್ಪುರ್ ಕ್ಷೇತ್ರದಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಇನ್ನು ಬಿಜೆಪಿಯ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಗಳಿಸಿದ್ದ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ಬಪಕ್ಷ ಈ ಬಾರಿ ಟಿಕೆಟ್ ನೀಡಿಲ್ಲ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಜೆಪಿ ನಡ್ಡಾ ಇಂದು ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಮಾಡಿದರು.  

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!