
ನವದೆಹಲಿ(ಏ.23): ಭಾರತದ ಪ್ರಸಿದ್ಧ ಬಾಕ್ಸಿಂಗ್ ಕ್ರೀಡಾಪಟು ವಿಜೇಂದ್ರ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ವಿಜೇಂದ್ರ ಸಿಂಗ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿರುವ ವಿಜೇಂದ್ರ ಸಿಂಗ್, ದೇಶದಲ್ಲಿ ಪ್ರಧಾನಿ ಮೋದಿ ಅಲೆ ಇರುವುದನ್ನು ನಾನಂತೂ ನೋಡಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜೇಂದ್ರ ಸಿಂಗ್, ಕಳೆದ 20 ವರ್ಷಗಳಿಂದ ಬಾಕ್ಸಿಂಗ್ ಮೂಲಕ ದೇಶಸೇವೆ ಮಾಡಿದ್ದು, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಮತ್ತೆ ದೇಶ ಸೇವೆಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.