ಅಫಿಡವಿಟ್ ನಲ್ಲಿ ರಾಧಿಕಾ, ಮಗಳ ಹೆಸರು ಮಿಸ್ಸಿಂಗ್: ಸಿಎಂಗೆ ಸಂಕಷ್ಟ

By Web DeskFirst Published Apr 24, 2019, 10:20 AM IST
Highlights

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದರೀಗ ಎಚ್. ಡಿ ಕುಮಾರಸ್ವಾಮಿಗೆ ಕಳೆದ ವರ್ಷ ವಿಧಾನಸಭಾ ಚುನಾವಣೆ ವೇಳೆ ಸಲ್ಲಿಸಿದ್ದ  ಅಫಿಡವಿಟ್ ಹೊಸ ಸಂಕಷ್ಟ ತಂದೊಡ್ಡಿದೆ. ತಮ್ಮ ಮದುವೆಗೆ ಸಂಬಂಧಿಸಿದಂತೆ ಅಫಿಡವಿಟ್ ನಲ್ಲಿ ತಪ್ಪು ಮಾಹಿತಿ ನೀಡಿದ್ದರಿಂದ ಆಯೋಗ ನೋಟೀಸ್ ನೀಡಿದೆ.

ಬೆಂಗಳೂರು[ಏ.24]: ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ 2018ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.

ಕಳೆದ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾದ ಎರಡು ಕ್ಷೇತ್ರದಿಂದಲೂ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದರು. ಚುನಾವಣಾಧಿಕಾರಿಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಕುಮಾರಸ್ವಾಮಿ ಅವರು 2ನೇ ಪತ್ನಿ ನಟಿ ರಾಧಿಕಾ, ಪುತ್ರಿ ಶಮಿಕಾ ಹಾಗೂ ಪುತ್ರ ನಿಖಿಲ್‌ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್‌ ಎಂಬುವರು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ

click me!