'ಮೋದಿ ಅಲೆ ಇಲ್ಲ, ಆರಾಮಾಗಿ 20ಕ್ಕಿಂತ ಹೆಚ್ಚು ಮೈತ್ರಿ ಅಭ್ಯರ್ಥಿಗಳು ಗೆಲ್ತಾರೆ'

Published : Apr 14, 2019, 07:54 PM ISTUpdated : Apr 14, 2019, 10:50 PM IST
'ಮೋದಿ ಅಲೆ ಇಲ್ಲ, ಆರಾಮಾಗಿ 20ಕ್ಕಿಂತ ಹೆಚ್ಚು ಮೈತ್ರಿ ಅಭ್ಯರ್ಥಿಗಳು ಗೆಲ್ತಾರೆ'

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ, [ಏ.14]: ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್. ಕೋನರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಸ್ತವವಾಗಿ ರಾಜ್ಯದಲ್ಲಿ ಮೋದಿ ಅಲೆ ಎಲ್ಲಿಯೂ ಇಲ್ಲ ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷ ಕನಿಷ್ಠ 19 ರಿಂದ 21 ಸ್ಥಾನ ಗೆಲ್ಲೋದರಲ್ಲಿ ಯಾವುದೇ ಅನುಮಾನವಿಲ್ಲ ರಾಜ್ಯದಲ್ಲಿ ಮೋದಿ ಗಾಳಿ ಇಲ್ಲ ಎಂದಿದ್ದಾರೆ.

 ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಾಧನೆ. ಸಾಲಮನ್ನಾ ಹಾಗೂ ಹಿಂದಿನ ಸಿದ್ದರಾಮಯ್ಯ  ಸರ್ಕಾರದ ಹಲವು ಜನಪ್ರಿಯ ಯೋಜನೆಗಳು ಈ ಬಾರಿಯ ಚುನಾವಣೆಯಲ್ಲಿ ಮೈತ್ರಿ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲಲು ಅನುಕೂಲವಾಗಲಿದೆ ಎಂದರು. 

ಹಲವೆಡೆ ಮೋದಿ ಸರಕಾರದ ಕಿಸಾನ್ ಸಮ್ಮಾನ್ ಯೋಜನೆಯನ್ನು ತಿರಸ್ಕಾರ ಮಾಡುತ್ತೇವೆ ಎಂದು ರೈತರು ಹೇಳುತ್ತಿದ್ದಾರೆ. ಉತ್ತರ ಕರ್ನಾಟಕದ ಎಲ್ಲೆಡೆ ಪ್ರವಾಸ ಮಾಡಿದ್ದೇನೆ ಮೈತ್ರಿ ಅಭ್ಯರ್ಥಿಗಳ ಪರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!