ಮೋದಿ VS ಸಿದ್ದು,  ರಾಮನ ಕರೆದುಕೊಂಡು ಪ್ರಚಾರಕ್ಕೆ ಹೊರಟ್ರಾ?

By Web DeskFirst Published Apr 8, 2019, 4:09 PM IST
Highlights

ಚುನಾವಣೆ ಸಂದರ್ಭದಲ್ಲಿ ಆರೋಪ ಪ್ರತ್ಯಾರೋಪಗಳು ಸರ್ವೆ ಸಾಮಾನ್ಯ,. ಆದರೆ ಈ ಬಾರಿ ಚುನಾವಣಾ ಪ್ರಚಾರಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರದ ವಿಚಾರ ಪ್ರಸ್ತಾಪ ಮಾಡದೆ ಇದ್ದರೂ ಸಿದ್ದರಾಮಯ್ಯ ಉಲ್ಲೇಖ ಮಾಡಿದ್ದಾರೆ.

ಬೆಂಗಳೂರು(ಏ.08)  ಅಯೋಧ್ಯೆ ರಾಮ ಮಂದಿರ ವಿಚಾರ ನ್ಯಾಯಾಲಯದಲ್ಲಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಹೆಸರಿನೊಂದಿಗೆ ರಾಮಮಂದಿರ ಉಲ್ಲೇಖ ಮಾಡಿದ್ದಾರೆ.

'ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ.  ಮೋದಿ ಅವರೇ, ಇನ್ನೆಷ್ಟು ಕಾಲ ಜನರ ಭಾವನೆಗಳನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತೀರ? 5 ವರ್ಷದಲ್ಲಿ ಒಮ್ಮೆಯಾದರೂ ಮಂದಿರ ನೆನಪಾಗಿರಲಿಲ್ಲವೇ?' 

ಈ ಕ್ಷೇತ್ರದಲ್ಲಿ ಸಾಮಾನ್ಯ ಚುನಾವಣೆಗಿಂತ 15 ಕೋಟಿ ಅಧಿಕ ಖರ್ಚು!

ಹೀಗೆಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ಮೋದಿ ಮತ್ತು ಬಿಜೆಪಿಯನ್ನು ರಾಮಮಂದಿರದ ಹೆಸರಿನಲ್ಲಿ ಟೀಕಿಸಿದ್ದಾರೆ.

 

 

ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ. ಅವರೇ, ಇನ್ನೆಷ್ಟು ಕಾಲ ಜನರ ಭಾವನೆಗಳನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತೀರ? 5 ವರ್ಷದಲ್ಲಿ ಒಮ್ಮೆಯಾದರೂ ಮಂದಿರ ನೆನಪಾಗಿರಲಿಲ್ಲವೇ?

— Siddaramaiah (@siddaramaiah)
click me!