ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ
ಬಳ್ಳಾರಿ[ಮಾ.25]: ಸಾರ್ವತ್ರಿಕ ಚುನಾವಣೆಗೆ ಗಣಿ ಜಿಲ್ಲೆಯಲ್ಲಿ ಅಖಾಡ ಸಿದ್ಧವಾಗಿದ್ದು, ಉಪ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲವು ಪಡೆದಿದ್ದ ಕಾಂಗ್ರೆಸ್‌ನ ವಿ. ಎಸ್. ಉಗ್ರಪ್ಪ ಹಾಗೂ ಬಿಜೆಪಿಯಿಂದ ಅರಸಿಕೇರಿ ದೇವೇಂದ್ರಪ್ಪ ಅವರು ಚುನಾವಣೆಯ ಎದುರಾಳಿಗಳು.
ಈ ಹಿಂದೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಅರಸಿಕೇರಿ ದೇವೇಂದ್ರಪ್ಪ ಅವರು ಜಾರಕಿಹೊಳಿ ಸಹೋದರರ ಹತ್ತಿರದ ಸಂಬಂಧಿಯೂ ಹೌದು.
ಕಾಂಗ್ರೆಸ್ ಹಾಗೂ ಬಿಜೆಪಿ ಸಮಬಲ ಸಂಘಟನೆ ಹೊಂದಿರುವ ಜಿಲ್ಲೆಯಲ್ಲಿ ಚುನಾವಣೆ ಕಣದ ಮೇಲೆ ತೀವ್ರ ಕುತೂಹಲ ಮೂಡಿಸಿದೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...