ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಚಿತ್ರದುರ್ಗದ ಚುನಾವಣಾ ಅಖಾಡ ಹೇಗಿದೆ? ಯಾರ್ಯಾರು ಕಣಕ್ಕಿಳಿಯಲಿದ್ದಾರೆ? ಇಲ್ಲಿದೆ ನೋಡಿ.
ಬೆಂಗಳೂರು (ಮಾ. 25): ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ.
ಭಾರೀ ಜನ ಬೆಂಬಲದೊಂದಿಗೆ ಮೈಸೂರು ’ಸಿಂಹ’ ನಾಮಪತ್ರ ಸಲ್ಲಿಕೆ
undefined
9 ಲೋಕಸಭಾ ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ 19 ಕ್ಷೇತ್ರಗಳಲ್ಲಿ ಸಮರಕ್ಕೆ ರಾಜಕೀಯ ಪಕ್ಷಗಳ ಸೇನಾನಿಗಳು ಸಜ್ಜಾಗಿದ್ದಾರೆ. ಚಿತ್ರದುರ್ಗದ ಚುನಾವಣಾ ಅಖಾಡ ಹೇಗಿದೆ? ಯಾರ್ಯಾರು ಕಣಕ್ಕಿಳಿಯಲಿದ್ದಾರೆ? ಇಲ್ಲಿದೆ ನೋಡಿ.
ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ಅಭ್ಯರ್ಥಿ
ಕಾಂಗ್ರೆಸ್‌ನಿಂದ ಹಾಲಿ ಸಂಸದ ಬಿ.ಎನ್.ಚಂದ್ರಪ್ಪ ಹಾಗೂ ಬಿಜೆಪಿಯಿಂದ ಮಾಜಿ ಸಚಿವ ಆನೇಕಲ್ ನಾರಾಯಣ ಸ್ವಾಮಿ ಹೆಸರು ಅಂತಿಮವಾಗಿದೆ. ಚಿತ್ರದುರ್ಗ ಕ್ಷೇತ್ರದಿಂದ ಭೋವಿ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದವಾದರೂ, ಶಾಸಕರು ರಾಜೀನಾಮೆ ಬೆದರಿಕೆ ಒಡ್ಡಿದರಾದರೂ ಬೇಡಿಕೆ ಈಡೇರಿಲ್ಲ. ಕೋಲಾರ ಮೀಸಲು ಕ್ಷೇತ್ರದಲ್ಲಿಯೂ ಭೋವಿ ಸಮುದಾಯ ಬಿಟ್ಟು ಟಿಕೆಟ್ ನೀಡಲಾಗಿದೆ. ಹಾಗಾಗಿ ಸಮುದಾಯ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.