ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ದಾವಣಗೆರೆಯಲ್ಲಿ ಚುನಾವಣಾ ಅಖಾಡ ಹೇಗೆ ಸಿದ್ಧವಾಗಿದೆ? ಇಲ್ಲಿದೆ ಮಾಹಿತಿ.
ಬೆಂಗಳೂರು (ಮಾ. 25): ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ.
ಮೊಯ್ಲಿ ‘ಜಾತಿ’ ಎಚ್ಚರಿಕೆಗೆ ಬಚ್ಚೇಗೌಡ ‘ಮೋದಿ’ ಉತ್ತರ!
undefined
9 ಲೋಕಸಭಾ ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ ೧೯ ಕ್ಷೇತ್ರಗಳಲ್ಲಿ ಸಮರಕ್ಕೆ ರಾಜಕೀಯ ಪಕ್ಷಗಳ ಸೇನಾನಿಗಳು ಸಜ್ಜಾಗಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಕಸರತ್ತು ತಲೆ ಬಿಸಿ ತಂದಿದ್ದರೆ, ಇನ್ನೂ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ಸಮಸ್ಯೆಯಾಗಿದೆ. ಜೆಡಿಎಸ್‌ಗೆ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಇದರ ನಡುವೆ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ತಿಕ್ಕಾಟ ತೀವ್ರಗೊಳ್ಳುತ್ತಿದೆ. ದಾವಣಗೆರೆಯಲ್ಲಿ ಚುನಾವಣಾ ಅಖಾಡ ಹೇಗೆ ಸಿದ್ಧವಾಗಿದೆ? ಇಲ್ಲಿದೆ ಮಾಹಿತಿ.
ಬಿಜೆಪಿಯಿಂದ ಶಿವಕುಮಾರ್ -ಕಾಂಗ್ರೆಸ್ ನಿಂದ ಪಾಟೀಲ್ : ನೇರ ಹಣಾಹಣಿ
ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಹ್ಯಾಟ್ರಿಕ್ ಗೆಲವು ಸಾಧಿಸಿದ್ದ ಸಂಸದ ಜಿ.ಎಂ.ಸಿದ್ದೇಶ್ವರ್ ಅವರನ್ನು ಮತ್ತೆ ಬಿಜೆಪಿ ಕಣಕ್ಕಿಳಿಸಿದೆ. ಮತ್ತೊಂದು ಕಡೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಬದಲಿಗೆ ದಕ್ಷಿಣ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಯಸ್ಸು, ಅನುಭವಕ್ಕೆ ಮಣೆ ಹಾಕುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಕ್ಷೇತ್ರ ಮರುವಶಕ್ಕೆ ಮುಂದಾಗಿದೆ.
ಮಲ್ಲಿಕಾರ್ಜುನ ಈಗ ತಮ್ಮ ತಂದೆ ಚುನಾವಣೆ ಉಸ್ತುವಾರಿ ನೋಡಿಕೊಳ್ಳುವ ಜೊತೆಗೆ ರಾಜಕೀಯ ಎದುರಾಳಿಗಳಿಗೂ ಚುರುಕು ಮುಟ್ಟಿಸಲು ಸಜ್ಜಾಗಿದ್ದಾರೆ. ಮತ್ತೊಂದು ಕಡೆ ಸಿದ್ದೇಶ್ವರ ಪರ ಉತ್ತರ ಶಾಸಕ ಎಸ್.ಎ.ರವೀಂದ್ರನಾಥ ನಿಂತಿದ್ದಾರೆ.