ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಹಾವೇರಿ - ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ
ಹಾವೇರಿ - ಗದಗ : ಬಿಜೆಪಿಯಿಂದ ಸಂಸದ ಶಿವಕುಮಾರ ಉದಾಸಿ ಹಾಗೂ ಕಾಂಗ್ರೆಸ್‌ನಿಂದ ಮಾಜಿ ಶಾಸಕ ಡಿ.ಆರ್. ಪಾಟೀಲ ಅವರಿಗೆ ಟಿಕೆಟ್ ದೊರೆತಿದ್ದು, ನೇರ ಹಣಾಹಣಿಗೆ ಅಖಾಡ ಸಜ್ಜುಗೊಂಡಂತಾಗಿದೆ.
ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಡಿ.ಆರ್. ಪಾಟೀಲ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿ ದ್ದಾರೆ. ಹಿಂದಿನ ಎರಡು ಲೋಕಸಭೆ ಚುನಾವಣೆ ಗಳಲ್ಲಿ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾದ ಹಿನ್ನೆಲೆಯಲ್ಲಿ ಈ ಸಲ ಬಿಜೆಪಿ ಎದುರಿಸಲು ಪ್ರಬಲ ಸಮುದಾಯದ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ.
ಇದರಿಂದ ಈ ಚುನಾವಣೆಯಲ್ಲಿ ಇಬ್ಬರ ನಡುವೆ ನೇರ ಹಣಾಹಣಿಯನ್ನು ನಿರೀಕ್ಷಿಸಬಹುದಾಗಿದೆ.