ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ
ಮೈಸೂರು : ಹಾಲಿ ಸಂಸದ ಬಿಜೆಪಿಯ ಪ್ರತಾಪ್ ಸಿಂಹ ಹಾಗೂ ಮಾಜಿ ಸಂಸದ ಕಾಂಗ್ರೆಸ್‌ನ ಸಿ.ಎಚ್. ವಿಜಯಶಂಕರ್ ಅವರ ನಡುವೆ ನೇರ ಹಣಾಹಣಿ ನಡೆಯಲಿದೆ.
ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜನತಾ ದಳವೇ ಸಾಂಪ್ರದಾಯಿಕ ಎದುರಾಳಿಗಳು. ಆದರೆ ಇದೇ ಮೊದಲ ಬಾರಿಗೆ 28 ವರ್ಷಗಳ ತರುವಾಯ ಜನತಾ ದಳದ ಅಭ್ಯರ್ಥಿ ಇಲ್ಲ.
ಪ್ರತಾಪ್ ಸಿಂಹ ಬಿಜೆಪಿ, ಪ್ರಧಾನಿ ಮೋದಿ ವರ್ಚಸ್ಸು ಹಾಗೂ ವೈಯಕ್ತಿಕ ಕೆಲಸದ ಆಧಾರದ ಮೇಲೆ ಮತ್ತೆ ಕಣಕ್ಕಿಳಿದಿದ್ದಾರೆ. ವಿಜಯಶಂಕರ್‌ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಾಮಬಲವಿದೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...