ಕರ್ನಾಟಕ ಕಾಂಗ್ರೆಸ್ ಮರ್ಯಾದೆ ಉಳಿಸಿದ ಡಿಕೆಶಿ ಬ್ರದರ್ಸ್!

By Web DeskFirst Published May 23, 2019, 7:56 PM IST
Highlights

 ರಾಜ್ಯ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಇವರಿಬ್ಬರು ಸೇರಿ ಪಕ್ಷದ ಮಾನ ಕಾಪಾಡಿದ್ದಾರೆ

ಬೆಂಗಳೂರು, (ಮೇ.23): ಡಿ.ಕೆ.ಶಿವಕುಮಾರ್ ರಾಜ್ಯ ಕಾಂಗ್ರೆಸ್‌ ಪಾಲಿಗೆ ಟ್ರಬಲ್ ಶೂಟರ್ ಎಂದೇ ಫೇಮಸ್.  ಇಂದು ಇದೇ ಡಿ.ಕೆ.ಶಿವಕುಮಾರ್ ಬ್ರದರ್ಸ್ ರಾಜ್ಯ ಕಾಂಗ್ರೆಸ್‌ ಮಾನ ಉಳಿಸಿದ್ದಾರೆ. 

ಇಂದು (ಗುರುವಾರ) 17ನೇ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ 28 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದೆ.

ಬಿಜೆಪಿ ಸ್ಪರ್ಧಿಸಿದ್ದ 27 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ್ರೆ, ಜೆಡಿಎಸ್ ಹಾಗೂ ಕಾಂಗ್ರೆಸ್ ತಲಾ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿವೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಗೆದ್ದು ಕಾಂಗ್ರೆಸ್‌ನ ಮಾನ ಕಾಪಾಡಿದ್ದಾರೆ.

ಮತ್ತೊಂದೆಡೆ ಧಾರವಾಡ ಜಿಲ್ಲೆಯ ಕೂಂದಗೋಳ ವಿಧಾನಸಭೆ ಉಪಚುನಾವಣೆ ಉಸ್ತುವಾರಿ ಹೊತ್ತು ಕುಸುಮ ಶಿವಳ್ಳಿ ಅವರನ್ನು ಗೆಲ್ಲಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ.

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಕರ್ನಾಟಕ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರು. ಪಕ್ಷ ಕೊಟ್ಟ ಟಾಸ್ಕ್‌ನ್ನು ಯಶಸ್ವಿಯಾಗಿ ಮಾಡಿ ಮುಗಿಸುವುದರಲ್ಲಿ ಎತ್ತಿದ ಕೈ.

ಈ ಹಿಂದೆ ಬಿಜೆಪಿ ಭದ್ರಕೋಟೆಯಾಗಿದ್ದ ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಶ್ರೀರಾಮುಲು ಸಹೋದರಿ ಜೆ.ಶಾಂತ ಅವರ ವಿರುದ್ಧ ವಿ.ಎಸ್. ಉಗ್ರಪ್ಪ ಅವರನ್ನು ಗೆಲ್ಲಿಸಿದ್ದರು. ಈಗ ಕುಂದಗೋಳದಲ್ಲಿ ಮ್ಯಾಜಿಕ್ ಮಾಡಿದ್ದಾರೆ. 

ರಜ್ಯ ಕಾಂಗ್ರೆಸ್‌ನಿಂದ ಗೆದ್ದ ಏಕೈಕ ಸಂಸದ ಡಿಕೆ ಸುರೇಶ್
ಬೆಂಗಳೂರು ಗ್ರಾಮಾಂತರ ಗೆಲುವು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಹಾಲಿ ಸಂಸದ, ಕಾಂಗ್ರೆಸ್‌-ಜೆಡಿಎಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಲೋಕಸಭಾ ಚುನಾವಣೆಯಲ್ಲಿ 8,78,285 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ಅಶ್ವಥ್ ನಾರಾಯಣ ಅವರನ್ನು ಸೋಲಿಸಿದ್ದಾರೆ. 206870 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ ಏಕೈಕ ಸಂಸದರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

click me!