
ಬೆಂಗಳೂರು(ಏ.14): ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಏ.18ರಂದು ನಡೆಯಲಿರುವ ಮತದಾನದ ವೇಳೆ ಮತದಾರರು ಮತಗಟ್ಟೆಗಳಿಗೆ ಮೊಬೈಲ್ ತರದಂತೆ ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಕರ್ತವ್ಯದ ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಚುನಾವಣಾಧಿಕಾರಿ ಎನ್. ಮಂಜುನಾಥ ಪ್ರಸಾದ್, ಕೇಂದ್ರ ಚುನಾವಣಾ ಆಯೋಗದ ಸೂಚನೆ ಇರುವ ಹಿನ್ನೆಲೆಯಲ್ಲಿ ಆದೇಶ ಜಾರಿಗೆ ತರಲಾಗುತ್ತಿದೆ ಎಂಧು ಸ್ಪಷ್ಟಪಡಿಸಿದರು.