ಮೋದಿ ವಿರುದ್ಧ ಕ್ರಮವಿಲ್ಲ: ವಿಚಾರಣಾ ಸಮಿತಿ ಸಭೆಯಿಂದ ಹೊರ ನಡೆದ ಆಯುಕ್ತ!

By Web DeskFirst Published May 18, 2019, 1:47 PM IST
Highlights

ಪ್ರಧಾನಿ ಮೋದಿ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಆರೋಪದ ವಿಚಾರಣೆ| ವಿಚಾರಣಾ ಸಮಿತಿ ಸಭೆಯಿಂದ ಹೊರ ನಡೆದ ಚುನಾವಣಾ ಆಯುಕ್ತ ಅಶೋಕ್ ಲವಾಸಾ| ತಮ್ಮ ಅಭಿಪ್ರಾಯಗಳಿಗೆ ಮನ್ನಣೆ ನೀಡಲಾಗುತ್ತಿಲ್ಲ ಎಂದ ಅಶೋಕ್ ಲವಾಸಾ| ವಿಚಾರಣಾ ಸಮಿತಿ ಸಭೆಗಳಿಗೆ ಹಾಜರಾಗದಿರುವ ನಿರ್ಧಾರ| ಮುಖ್ಯ ಚುನಾವಣಾ ಆಯುಕ್ತರಿಗೆ ಅಶೋಕ್ ಲವಾಸಾ ಪತ್ರ| 

ನವದೆಹಲಿ(ಮೇ.18): ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಆರೋಪದ ವಿಚಾರಣೆ ವೇಳೆ, ತಮ್ಮ ಅಭಿಪ್ರಾಯವನ್ನು ಆಲಿಸಲಾಗಿಲ್ಲ ಎಂದು ಆರೋಪಿಸಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ವಿಚಾರಣಾ ಸಮಿತಿ ಸಭೆಗಳಿಗೆ ಹಾಜರಾಗದಿರುವ ನಿರ್ಧಾರ ಕೈಗೊಂಡಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮತ್ತು ಚುನಾವಣಾ ಆಯುಕ್ತರಾದ ಅಶೋಕ್ ಲವಾಸಾ ಮತ್ತು ಸುಶೀಲ್ ಚಂದ್ರ ನೇತೃತ್ವದ ವಿಚಾರಣಾ ಸಮಿತಿಯಲ್ಲಿ ತಮ್ಮ ಅಭಿಪ್ರಾಯಗಳಿಗೆ ಮನ್ನಣೆ ನೀಡಲಾಗಿಲ್ಲ ಎಂದು ಅಶೋಕ್ ಲವಾಸಾ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ 6 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ ಆಯೋಗ ಅವರಿಗೆ ಕ್ಲಿನ್ ಚಿಟ್ ನೀಡಿತ್ತು. ಆದರೆ ಅಶೋಕ್ ಲವಾಸಾ ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು ಎನ್ನಲಾಗಿದೆ.

Chief Election Commissioner Sunil Arora issues statement on EC Ashok Lavasa's purported letter to him, says, 'an unsavory and avoidable controversy reported in sections of media today about internal functioning of ECI in respect of handling of Model Code of Conduct.' (3/3) pic.twitter.com/yuRxOHMaGL

— ANI (@ANI)

ಯಾವುದೇ ಪ್ರಕರಣದಲ್ಲಿ ತಮ್ಮ ಅಭಿಪ್ರಾಯಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ವಿಚಾರಣಾ ಸಮಿತಿ ಸಭೆಗಳಿಗೆ ಇನ್ನು ಮುಂದೆ ಹಾಜರಾಗುವುದಿಲ್ಲ ಎಂದು ಅಶೋಕ್ ಲವಾಸಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿರುವ ಅಶೋಕ್ ಲವಾಸಾ, ಇನ್ನು ಮುಂದೆ ವಿಚಾರಣಾ ಸಮಿತಿ ಸಭೆಗೆ ಹಾಜರಾಗುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

click me!