ಎಲೆಕ್ಷನ್ ನಿಲ್ಲಂಗಿಲ್ಲ ಹಾರ್ದಿಕ್: ಕೋರ್ಟ್ ತೀರ್ಪು ತಂದ ಹಿನ್ನಡೆ!

Published : Mar 29, 2019, 06:53 PM ISTUpdated : Mar 29, 2019, 06:57 PM IST
ಎಲೆಕ್ಷನ್ ನಿಲ್ಲಂಗಿಲ್ಲ ಹಾರ್ದಿಕ್: ಕೋರ್ಟ್ ತೀರ್ಪು ತಂದ ಹಿನ್ನಡೆ!

ಸಾರಾಂಶ

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಹಾರ್ದಿಕ್ ಪಟೇಲ್ ಕನಸು ಭಗ್ನ| 2015 ರಲ್ಲಿ ಮೆಹ್ಸಾನ ಗಲಭೆ ಪ್ರಕರಣದ ವಿಚಾರಣೆ ತಡೆಗೆ ಹೈಕೋರ್ಟ್ ನಕಾರ| ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ| ಮೆಹ್ಸಾನ್ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಹಾರ್ದಿಕ್|

ಅಹಮದಾಬದ್(ಮಾ.29): ಮಹತ್ವದ ಬೆಳವಣಿಗೆಯೊಂದರಲ್ಲಿ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಹಾರ್ದಿಕ್ ಪಟೇಲ್ ಕನಸು ಬಹುತೇಕ ಭಗ್ನಗೊಂಡಿದೆ.

2015 ರಲ್ಲಿ ಮೆಹ್ಸಾನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ. 

ಮೆಹ್ಸಾನ್ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಹಾರ್ದಿಕ್ ಪಟೇಲ್, ತೀರ್ಪಿಗೆ ತಡೆ ನೀಡಬೇಕೆಂದು ಕೋರಿ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. 

1951 ರ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಹಾರ್ದಿಕ್ ಪಟೇಲ್ ವಿರುದ್ಧದ ಆರೋಪ ಸಾಬೀತಾಗಿದ್ದು, ಅಪರಾಧಿಯಾಗಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಸಾಧ್ಯವಾಗುವುದಿಲ್ಲ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!