ಬಿಜೆಪಿಗೆ 22 ಸ್ಥಾನ ಬಂದ ಮರುದಿನವೇ ಎಚ್‌ಡಿಕೆ ಮನೆಗೆ: ಕಾಂಗ್ರೆಸ್ ನಾಯಕ

By Web DeskFirst Published Mar 29, 2019, 11:07 AM IST
Highlights

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಪಕ್ಷಗಳು ಗೆಲುವಿನ ಕಸರತ್ತು ನಡೆಸುತ್ತಿವೆ. ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ 22 ಸ್ಥಾನ ಗೆದ್ದರೆ ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಹೇಳಿದ್ದಾರೆ. 

ಚಿಕ್ಕಬಳ್ಳಾಪುರ: ಬಿ.ಎಸ್‌.ಯಡಿಯೂರಪ್ಪ ಅವರ ಕಣ್ಣು ಮುಖ್ಯಮಂತ್ರಿ ಕುರ್ಚಿಯ ಮೇಲಿದೆ. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22 ಸ್ಥಾನ ಗೆದ್ದರೆ, ಮಾರನೇ ದಿನವೇ ಕುಮಾರಸ್ವಾಮಿ ಮನೆಗೆ ಹೋಗುತ್ತಾರೆ ಎಂದು ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಪುನರುಚ್ಚಾರಿಸಿದ್ದಾರೆ.

ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿಯ ತಿಮ್ಮಂಪಲ್ಲಿಯಲ್ಲಿ ಗುರುವಾರ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಯಡಿಯೂರಪ್ಪನವರ ಕನಸು ನನಸಾಗದಂತೆ ಮಾಡಲು ಕಾಂಗ್ರೆಸ್‌ಗೆ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಕುಮಾರಸ್ವಾಮಿ ಅವರ ಮುಖ್ಯಮಂತ್ರಿ ಸ್ಥಾನವನ್ನು ಭದ್ರಗೊಳಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಬಿಜೆಪಿ ಗೆಲುವು ಸಾಧಿಸಿದರೆ ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಕೆಡಹುವುದು ಖಚಿತ ಎಂದು ಇತ್ತೀಚೆಗಷ್ಟೇ ವೀರಪ್ಪಮೊಯ್ಲಿ ಹೇಳಿಕೆ ನೀಡಿದ್ದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

click me!