ನಿಖಿಲ್ ಚುನಾವಣೆಯಲ್ಲಿ ಸೋತರು ಸಚಿವ ಸ್ಥಾನ !

Published : May 02, 2019, 08:50 AM IST
ನಿಖಿಲ್ ಚುನಾವಣೆಯಲ್ಲಿ ಸೋತರು ಸಚಿವ ಸ್ಥಾನ !

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದೇ ವೇಳೆ ಹಲವು ಬೆಳವಣಿಗಗಳಾಗುತ್ತಿವೆ. ಒಂದು ವೇಳೆ ನಿಖಿಲ್ ಸೋತರು ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆಯೇ? ಹೇಗೆ?

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ಜೆಡಿಎಸ್‌ಗೆ ವ್ಯತಿರಿಕ್ತವಾಗಿ ಬಂದರೆ ನಿಖಿಲ್ ಕುಮಾರ ಸ್ವಾಮಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಬೇಕು ಎಂದು ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರಿಂದ ಒತ್ತಾಯ ಕೇಳಿಬಂದಿದೆ.

ಸ್ಥಳೀಯ ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಕೈಕೊಟ್ಟ ಹಿನ್ನೆಲೆಯಲ್ಲಿ ಒಂದು ವೇಳೆ ನಿಖಿಲ್ ಅವರಿಗೆ ಚುನಾವಣೆಯಲ್ಲಿ ಹಿನ್ನಡೆಯಾದರೆ ಅವರನ್ನು ಸಕ್ರಿಯ ರಾಜಕಾರಣದಲ್ಲಿ ಇರುವಂತೆ ಮಾಡಬೇಕು. ಏಕೆಂದರೆ, ಈ ಚುನಾವಣೆಯಲ್ಲಿ ಒಂದು ವೇಳೆ ಹಿನ್ನಡೆಯಾದರೂ ಅದು ತಾತ್ಕಾಲಿಕ. 

ಹೀಗಾಗಿ  ಮಂಡ್ಯದಲ್ಲಿ ಅವರು ಸಕ್ರಿಯವಾಗಿ ಇರುವಂತೆ ಮಾಡಲು ಅವರಿಗೆ ರಾಜಕೀಯ ಸ್ಥಾನಮಾನ ನೀಡುವಂತಾಗಬೇಕು. ಹೀಗಾಗಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡಬೇಕು ಎಂದು ಮಂಡ್ಯ ಜಿಲ್ಲೆಯ ಕೆಲ ಜೆಡಿಎಸ್ ನಾಯಕರು ಒತ್ತಾಯ ಮಾಡಿದ್ದಾರೆ ಎನ್ನಲಾಗುತ್ತಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!