ಮತಕ್ಕಾಗಿ ಹಣ ಹಂಚುತ್ತಿದ್ದಾರಾ? ಈ ನಂಬರ್ ಗೆ ಕರೆ ಮಾಡಿ

Published : Mar 17, 2019, 10:04 AM IST
ಮತಕ್ಕಾಗಿ ಹಣ ಹಂಚುತ್ತಿದ್ದಾರಾ? ಈ ನಂಬರ್ ಗೆ ಕರೆ ಮಾಡಿ

ಸಾರಾಂಶ

ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಚುನಾವಣೆಯಲ್ಲಿ ನಡೆಯುವ ಅಕ್ರಮ ತಡೆಯಲು ಟೋಲ್ ಫ್ರೀ ಸಂಖ್ಯೆಯೊಂದನ್ನು ಆರಂಭಿಸಲಾಗಿದೆ. 

ಬೆಂಗಳೂರು :  ಲೋಕಸಭಾ ಚುನಾವಣೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಯುವಲ್ಲಿ ಚುನಾವಣಾ ಆಯೋಗದ ಜತೆ ಕೈ ಜೋಡಿಸಿರುವ ಆದಾಯ ತೆರಿಗೆ ಇಲಾಖೆಯು ಸಾರ್ವಜನಿಕರು ದೂರು ಸಲ್ಲಿಸಲು ಸಹಾಯವಾಣಿ ಆರಂಭಿಸಿದೆ. 

ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಣದ ಆಮಿಷವೊಡ್ಡಿ ನಗ-ನಾಣ್ಯ ಸೇರಿದಂತೆ ಇತರೆ ವಸ್ತುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇಂತಹ ಅಕ್ರಮಗಳು ಕಂಡುಬಂದರೆ ದೂರು ನೀಡಲು ಸಹಾಯವಾಣಿ ಪ್ರಾರಂಭಿಸಲಾಗಿದೆ. 

ಕ್ವೀನ್ಸ್‌ ರಸ್ತೆಯಲ್ಲಿನ ಐಟಿ ಕಚೇರಿಯಲ್ಲಿ ಹೊಸದಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಾರ್ವಜನಿಕರ ಗಮನಕ್ಕೆ ಬಂದರೆ ಟೋಲ್‌ ಫ್ರೀ ಸಂಖ್ಯೆ ಅಥವಾ ಮೊಬೈಲ್‌ ನಂಬರ್‌ಗೆ ಕರೆ ಮಾಡಲು ತಿಳಿಸಲಾಗಿದೆ. ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಆದಾಯ ತೆರಿಗೆ ಇಲಾಖೆ ಅಧಿಕಾರಿ ಎಚ್‌.ಎಸ್‌.ಸುಬ್ಬಣ್ಣ ಅವರ ನೇತೃತ್ವದಲ್ಲಿ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಟೋಲ್‌ ಫ್ರೀ ಸಂಖ್ಯೆ18004252115, ದೂರವಾಣಿ ಸಂಖ್ಯೆ 080-22861126, ಮೊಬೈಲ್‌ ಸಂಖ್ಯೆ - 8277422825, 8277413614ಗೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ. ಇ-ಮೇಲ್‌ Cleankarnatakaelection@incomtax.Gov.in ಗೆ ಮಾಹಿತಿ ನೀಡಬಹುದಾಗಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!