ಮೇ.23ಕ್ಕೆ ಉಗ್ರ ದಾಳಿ ಸಾಧ್ಯತೆ: ಗುಪ್ತಚರ ಇಲಾಖೆ ಎಚ್ಚರಿಕೆ!

Published : May 21, 2019, 05:39 PM IST
ಮೇ.23ಕ್ಕೆ ಉಗ್ರ ದಾಳಿ ಸಾಧ್ಯತೆ: ಗುಪ್ತಚರ ಇಲಾಖೆ ಎಚ್ಚರಿಕೆ!

ಸಾರಾಂಶ

ಮೇ.23ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ| ಭಯೋತ್ಪಾದಕ ದಾಳಿಯಾಗುವ ಸಂಭವನೀಯತೆ ಹೆಚ್ಚು| ಗುಪ್ತಚರ ಇಲಾಖೆಯಿಂದ ಬೆಚ್ಚಿ ಬೀಳಿಸುವ ವರದಿ| ಮೋದಿ ಮತ್ತೆ ಪ್ರಧಾನಿ ಎಂಬ ಚುನಾವಣೋತ್ತರ ಸಮೀಕ್ಷೆ ವರದಿ ಹಿನ್ನೆಲೆ| ಪಾಕ್ ಬೆಂಬಲಿತ ಉಗ್ರರಿಂದ ವಿಧ್ವಂಸಕ ಕೃತ್ಯ ಎಸಗಲು ಸಂಚು| ಕಟ್ಟೆಚ್ಚರದ ಕ್ರಮ ಕೈಗೊಳ್ಳಲು ಮುಂದಾದ ಕೇಂದ್ರ ಗೃಹ ಇಲಾಖೆ|

ನವದೆಹಲಿ(ಮೇ.21): ಮಹತ್ವದ ಬೆಳವಣಿಗೆಯೊಂದರಲ್ಲಿ ಮೇ.23ರ ಲೋಕಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ, ಭಯೋತ್ಪಾದಕ ದಾಳಿಯಾಗುವ ಸಂಭವನೀಯತೆ ಹೆಚ್ಚಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಚುನಾವಣೋತ್ತರ ಸಮೀಕ್ಷೆಗಳೆಲ್ಲಾ ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೆ ಅಧಿಕಾರ ಪಡೆಯಲಿದೆ ಎಂದು ಅಂದಾಜಿಸಿದ್ದು, ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಖಚಿತವಾಗಿ ಹೇಳಿವೆ. ಇದರಿಂದ ಬೇಸತ್ತಿರುವ ಪಾಕಿಸ್ತಾನ, ಮೇ.23ರಂದು ದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.

ಪಾಕ್ ಬೆಂಬಲಿತ ಉಗ್ರರು ಈಗಾಗಲೇ ಗಡಿಯಲ್ಲಿ ಸನ್ನದ್ಧವಾಗಿದ್ದು, ಯಾವಾಗ ಬೇಕಾದರೂ ಗಡಿ ದಾಟಿ ಕಣಿವೆ ರಾಜ್ಯಕ್ಕೆ ನುಗ್ಗಬಹುದು ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇನ್ನು ಗುಪ್ತಚರ ಮಾಹಿತಿ ಆಧರಿಸಿ ದೇಶಾದ್ಯಂತ ಕಟ್ಟೆಚ್ಚರದ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಇಲಾಖೆ ಸಿದ್ಧವಾಗಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!