ಚಿಕ್ಕಮಗಳೂರು-ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಪ್ರಚಾರದ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡಿಕೊಂಡಿದ್ದ
ಶಾಸಕ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ.
ಚಿಕ್ಕಮಗಳೂರು, [ಏ.13]: ಮತದಾರರ ಬಗ್ಗೆ ಅವಹೇಳನಕಾರಿ ಭಾಷಣ ಹಿನ್ನೆಲೆ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದೂರು ದಾಖಲಾಗಿದೆ.
ಚಿಕ್ಕಮಗಳೂರು-ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಪ್ರಚಾರದ ಭಾಷಣದ ವೇಳೆ ಬಿಜೆಪಿಗೆ ಮತ ಹಾಕದವರು ತಾಯಿಗಂಡರು ಎಂದು ಸಿ.ಟಿ ರವಿ ಹೇಳಿದ್ದಾರೆ.
ಈ ಹೇಳಿಕೆ ವಿರುದ್ಧ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿ ಶಿರಾಜ್ ಹುಸೈನ್ ಎನ್ನುವರು ಸ್ಥಳೀಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.