'ಲೋಕಸಭಾ ಚುನಾವಣೆ : 6 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗೆ ಜಯ'

Published : May 22, 2019, 02:03 PM IST
'ಲೋಕಸಭಾ ಚುನಾವಣೆ : 6 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗೆ ಜಯ'

ಸಾರಾಂಶ

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಯಾರಿಗೆ ಗೆಲುವು ಯಾರಿಗೆ ಸೋಲು ಎನ್ನುವುದು ತಿಳಿಯಲು ಒಂದೇ ದಿನ ಬಾಕಿ ಉಳಿದಿದೆ. ಅಭ್ಯರ್ಥಿಗಳಲ್ಲಿ ಇದೇ ಸಂದರ್ಭದಲ್ಲಿ ವಿಶ್ವಾಸವೂ ಕೂಡ ಹೆಚ್ಚುತ್ತಿದೆ.

ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಿದ್ಧತೆ ಆರಂಭವಾಗಿದ್ದು, ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತ ಅಭ್ಯರ್ಥಿಗಳಲ್ಲಿ ಭರವಸೆಯೂ ಕೂಡ ಹೆಚ್ಚಾಗುತ್ತಿದೆ. 

ಲೋಕಸಭಾ ಫಲಿತಾಂಶಕ್ಕೆ ಒಂದು ದಿನವಷ್ಟೇ ಬಾಕಿ ಉಳಿದಿದ್ದು, ಇದೇ ವೇಳೆ ಅನಿತಾ ಕುಮಾರಸ್ವಾಮಿ ಹಾಗೂ ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚಿಕ್ಕಮಗಳೂರಿನ ಶೃಂಗೇರಿಗೆ ಭೇಟಿ ನೀಡಿದ್ದಾರೆ. 

Exit poll: ಜೆಡಿಎಸ್ ತೀರ್ಮಾನದಲ್ಲಿ ದಿಢೀರ್ ಬದಲಾವಣೆ

ಶೃಂಗೇರಿಯಲ್ಲಿ ಶಾರದೆಯ ಸನ್ನಿಧಾನಕ್ಕೆ ಪಡೆ ಪದೆ ಆಗಮಿಸುತ್ತಿದ್ದು, ದೇವಿ ಹಾಗೂ ಜನರ ಆಶೀರ್ವಾದ ನಮ್ಮ ಮೇಲಿದೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. 

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದು, ಜೆಡಿಎಸ್ 6 ಸ್ಥಾನಗಳಲ್ಲಿ ಗೆಲ್ಲುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕದ 28 ಲೋಕಸಭಾ ಸಿ-ವೋಟರ್ ಸಮೀಕ್ಷೆ: ಯಾರು ಗೆಲ್ತಾರೆ? ಯಾರು ಸೋಲ್ತಾರೆ?

ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಬಿಜೆಪಿ ಸರ್ಕಾರ ರಚನೆಗೆ ಡೆಡ್ ಲೈನ್ ಕೊಡುತ್ತಿದೆ. ಆದರೆ ಸರ್ಕಾರ ಪತನಗೊಳಿಸುವ ಅವರ ಆಸೆ ಇನ್ನಾದರೂ ಕೂಡ ಈಡೇರಿಲ್ಲ ಎಂದು ಅನಿತಾ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!