
ಮಂಡ್ಯ, [ಏ.04]: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ನಾಗಮಂಗಲ ತಾಲೂಕಿನಲ್ಲಿ ಪ್ರಚಾರ ಕೈಗೊಂಡಿದ್ದ ದರ್ಶನ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.
ದರ್ಶನ್ ಇಂದಿನ ಪ್ರಚಾರಕಾರ್ಯ ಮುಗಿಸಿ ಮೈಸೂರಿನತ್ತ ತೆರಳುವಾಗ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಕಲ್ಲು ಎಸೆದಿದ್ದಾರೆ.
ಇದ್ರಿಂದ ದರ್ಶನ್ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿ ಗುಂಪು ಚದುರಿಸಲು ಲಾಠಿ ಬೀಸಿದರು. ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ.