ವಿಜಯಪುರ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರು?

Published : Mar 26, 2019, 11:44 AM IST
ವಿಜಯಪುರ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರು?

ಸಾರಾಂಶ

ಇನ್ನೂ ಘೋಷಣೆ ಆಗದ ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ| ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಪತ್ನಿ ಹಾಗೂ ಸಹೋದರ ಮಧ್ಯೆ ಪೈಪೋಟಿ| ಚವ್ಹಾಣ ಕುಟುಂಬ ಸೇರಿ ಹಲವರು ಟಿಕೆಟ್ ಗಾಗಿ ಪೈಪೋಟಿ| ಹೈಕಮಾಂಡ ಬುಲಾವ್ ಮೇರೆಗೆ ಬೆಂಗಳೂರಿಗೆ ದೌಡಾಯಿಸಿದ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ| ಇಂದು ಬಹುತೇಕ ಅಭ್ಯರ್ಥಿ ಹೆಸರು ಘೋಷಣೆ ಆಗುವ ಸಾಧ್ಯತೆ|

ವಿಜಯಪುರ(ಮಾ.26): ವಿಜಯಪುರ ಕ್ಷೇತ್ರಕ್ಕೆ ಜೆಡಿಎಸ್ ಇದುವರೆಗೂ ಅಭ್ಯರ್ಥಿ ಘೋಷಣೆಯಾಗದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಮೂಲಗಳ ಪ್ರಕಾರ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ್ ಪತ್ನಿ ಹಾಗೂ ಅವರ ಸಹೋದರ ಮಧ್ಯೆ ಪೈಪೋಟಿ ಏರ್ಪಟ್ಟಿದೆ.

ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಪತ್ನಿ ಮತ್ತು ಸಹೋದರರ ಮಧ್ಯೆ ಟಿಕೆಟ್ ಗಾಗಿ ಪೈಪೋಟಿ ಏರ್ಪಟ್ಟಿದ್ದು, ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಇದೀಗ ಬೆಂಬಲಿಗರಲ್ಲಿ ಮೂಡಿದೆ.

ಅದರಂತೆ ದೇವಾನಂ ಚ್ಹಾವಣ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯ ಆರಂಭವಾಗಿದ್ದರೂ ಅಭ್ಯರ್ಥಿ ಘೋಷಣೆಯಾಗದಿರುವುದು ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಇಂದು ಬಹುತೇಕ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!