ಹಣ ನೀಡದ್ದಕ್ಕೆ ಮತಗಟ್ಟೆ ಬಾಗಿಲಿಗೇ ಬೆಂಕಿ ಹಾಕಿದರು!

Published : Apr 18, 2019, 10:15 AM ISTUpdated : Apr 18, 2019, 10:17 AM IST
ಹಣ ನೀಡದ್ದಕ್ಕೆ ಮತಗಟ್ಟೆ ಬಾಗಿಲಿಗೇ ಬೆಂಕಿ ಹಾಕಿದರು!

ಸಾರಾಂಶ

ಮಿತ್ರ ಪಕ್ಷದವರು ಹಣ ನೀಡದ್ದಕ್ಕೆ ಮತಗಟ್ಟೆ ಬಾಗಿಲಿಗೇ ಬೆಂಕಿ! ಕೋಲಾರದ ಶ್ರೀನಿವಾಸಪುರ ತಾಲೂಕಿನಲ್ಲಿ ಘಟನೆ | ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಬೇರೊಂದು ಕೊಠಡಿಯಲ್ಲಿ ವ್ಯವಸ್ಥೆ ಮಾಡಿದ್ದಾರೆ. 

ಕೋಲಾರ (ಏ. 18): ಮತದಾನಕ್ಕೆ ಒಂದೇ ದಿನ ಬಾಕಿ ಇದೆ ಎನ್ನುವಾಗ ಮತಗಟ್ಟೆಯ ಬಾಗಿಲಿಗೆ ಬೆಂಕಿ ಹಚ್ಚಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಲೋಚರುಪಲ್ಲಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರ ಕೈಯಲ್ಲಿ ಮತದಾರರಿಗೆ ಹಂಚಲು ಹಣ ನೀಡಲಾಗಿತ್ತು ಎನ್ನಲಾಗಿದೆ. ಆದರೆ, ಆ ವ್ಯಕ್ತಿ ಗ್ರಾಮದಲ್ಲಿ ಜೆಡಿಎಸ್‌ಗೆ ಸೇರಿದ ಮತದಾರರಿಗೆ ಹಣ ವಿತರಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಆ ಪಕ್ಷದ ಕಾರ್ಯಕರ್ತರು ಗ್ರಾಮದಲ್ಲಿ ಚುನಾವಣೆ ನಡೆಯುವುದೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ(ಸಂಖ್ಯೆ 94) ಬಾಗಿಲಿಗೇ ಬೆಂಕಿ ಹಚ್ಚಿದ್ದಾರೆನ್ನಲಾಗಿದೆ.

ಪ್ರತ್ಯೇಕ ಕೊಠಡಿ: ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಗುರುವಾರ ನಡೆಯಲಿರುವ ಮತದಾನದ ವೇಳೆ ಯಾವುದೇ ತೊಂದರೆಯಾಗದಂತೆ ಅದೇ ಶಾಲೆಯಲ್ಲಿ ಬೇರೆ ಕೊಠಡಿಯೊಂದನ್ನು ವ್ಯವಸ್ಥೆ ಮಾಡಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!