ಕಾಂಗ್ರೆಸ್ ತೊರೆಯಲು ಸಿದ್ಧವಾದ ಮಾಜಿ ಸಚಿವಗೆ ಬಿಜೆಪಿ ಟಿಕೆಟ್..?

By Web Desk  |  First Published Mar 14, 2019, 12:24 PM IST

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದೇ ವೇಳೆ ಟಿಕೆಟ್ ಫೈಟ್ ಪಕ್ಷಗಳಲ್ಲಿ ಜೋರಾಗಿದೆ. 


ಹಾಸನ :  ಜಿಲ್ಲೆಯಲ್ಲಿ ಜೆಡಿಎಸ್‌ನಿಂದ ದೇವೇಗೌಡರು ಸ್ಪರ್ಧೆ ಮಾಡಿದರೇ ಮಾತ್ರ ತಮ್ಮ ಬೆಂಬಲ, ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೇ ಬೆಂಬಲ ನೀಡುವುದಿಲ್ಲ ಎಂದು ಕಾಂಗ್ರೆಸ್‌ನ ಮಾಜಿ ಸಚಿವ ಎ.ಮಂಜು ಹಾಗೂ ಇತರೆ ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ವಿರೋಧ
ವ್ಯಕ್ತಪಡಿಸಿದ್ದರು. 

ಇದೀಗ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗಿರುವುದರಿಂದ ಎ.ಮಂಜು ಬಿಜೆಪಿ ಅಭ್ಯರ್ಥಿಯಾಗುವುದು ಖಚಿತವಾದಂತಿದೆ. ಈಗಾಗಲೇ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನವರನ್ನು ಭೇಟಿಯಾಗಿ ಹಾಸನದಿಂದ ಬಿಜೆಪಿ ಟಿಕೆಟ್ ನೀಡುವಂತೆ ಕೇಳಿದ್ದಾರೆ. 

Tap to resize

Latest Videos

ಆದರೆ ಮಂಜುಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್. ಯೋಗಾ ರಮೇಶ್ ತೀವ್ರವಾಗಿ ವಿರೋಧ ವ್ಯಕ್ತಪಡಿಸಿರು ವುದರಿಂದ ಬಿಜೆಪಿ ಅಂತಿಮ ತೀರ್ಮಾನದತ್ತ ಎಲ್ಲರ ಚಿತ್ತ ನೆಟ್ಟಿದೆ.

click me!