ಬೆಂ.ಗ್ರಾ.ಕ್ಕೆ ರಾಹುಲ್ ಬಂದರೆ ಬಿಜೆಪಿ ಅಭ್ಯರ್ಥಿ ಯಾರು..?

Published : Mar 23, 2019, 10:08 AM IST
ಬೆಂ.ಗ್ರಾ.ಕ್ಕೆ ರಾಹುಲ್ ಬಂದರೆ ಬಿಜೆಪಿ ಅಭ್ಯರ್ಥಿ ಯಾರು..?

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಅಭ್ಯರ್ಥಿಗಳ ಆಯ್ಕೆಯ ಕುತೂಹಲವೂ ಕೂಡ ಗರಿಗೆದರಿದೆ. ಇದೀಗ ರಾಹುಲ್ ಗಾಂಧಿ ಬೆಂಗಳೂರು ಗ್ರಾಮಾಂತರಕ್ಕೆ ಬಂದರೆ ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ಆಗುವ ಸಾಧ್ಯತೆ ಇದೆ. 

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯನ್ನು ಮೊದಲ ಹಂತದ ಪಟ್ಟಿಯಲ್ಲಿ ಘೋಷಿಸದೆ ಉಳಿಸಿಕೊಂಡಿದೆ. 

ಒಂದು ವೇಳೆ  ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ ಅಭ್ಯರ್ಥಿಯಾದಲ್ಲಿ ಆಗ ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. 

ಈವರೆಗೆ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುತ್ತಾರಾ, ಸ್ಪರ್ಧಿಸಿದರೆ ಯಾವ ಕ್ಷೇತ್ರದಿಂದ ಎಂಬುದು ಅಸ್ಪಷ್ಟವಾಗಿದೆ. ಸದ್ಯದ ಮಟ್ಟಿಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಅವರನ್ನು ಅಭ್ಯರ್ಥಿಯನ್ನಾಗಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. 

ಆದರೆ, ರಾಹುಲ್ ಗಾಂಧಿ ಈ ಕ್ಷೇತ್ರದಿಂದ ಕಣಕ್ಕಿಳಿದಲ್ಲಿ ಆಗ ಅಶೋಕ್ ಅವರು ಬಿಜೆಪಿ ಅಭ್ಯರ್ಥಿಯಾಗಬಹುದು ಎನ್ನಲಾಗಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!