ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಅಭ್ಯರ್ಥಿಗಳ ಪ್ರಚಾರ ಕಾರ್ಯವೂ ಮುಕ್ತಾಯವಾಗಿದ್ದು, ಇನ್ನೊಂದು ದಿನದಲ್ಲಿ 237 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಬೆಳಗಾವಿ : ಎರಡನೇ ಹಂತದಲ್ಲಿ ಚುನಾವಣೆ ನಡೆಯುವ 14 ಲೋಕಸಭೆ ಕ್ಷೇತ್ರದಲ್ಲಿ 237 ಅಭ್ಯರ್ಥಿ ಗಳು ಕಣದಲ್ಲಿದ್ದು, ಬೆಳಗಾವಿಯಲ್ಲಿ ಅಧಿಕ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.
57 ಅಭ್ಯರ್ಥಿಗಳು ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ 4 ಎಇವಿಂಗಳನ್ನು ಬಳಕೆ ಮಾಡಲಾಗುತ್ತಿದೆ. ಬೀದರ್ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು, ಧಾರವಾಡದಲ್ಲಿ 19 ಮತ್ತು ದಾವಣಗೆರೆಯಲ್ಲಿ 25 ಅಭ್ಯರ್ಥಿಗಳು ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ 2 ಇವಿಎಂ ಬಳಕೆ ಮಾಡಲಾಗುವುದು.
ಇನ್ನುಳಿದ ಕ್ಷೇತ್ರದಲ್ಲಿ ಒಂದೊಂದು ಇವಿಎಂ ಬಳಕೆ ಮಾಡಲಾಗುತ್ತಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದರು.