6 ಮಂದಿ ಕಾಂಗ್ರೆಸ್ ನಾಯಕರ ಉಚ್ಛಾಟನೆ

Published : Mar 25, 2019, 09:15 AM IST
6 ಮಂದಿ ಕಾಂಗ್ರೆಸ್ ನಾಯಕರ ಉಚ್ಛಾಟನೆ

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭದಲ್ಲಿ  ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರನ್ನು ಉಚ್ಛಾಟನೆ ಮಾಡಲಾಗಿದೆ. 

ಮಂಡ್ಯ: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸಮಲತಾ ಅವರನ್ನು ಬೆಂಬಲಿಸಿ, ಪ್ರಚಾರದ ಕಣದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಜಿಲ್ಲೆಯ ಯುವ ಕಾಂಗ್ರೆಸ್‌ ಆರು ಮಂದಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಗೀತಾ ರಾಜಣ್ಣ ಉಚ್ಚಾಟನೆ ಮಾಡಿ ಆದೇಶ ನೀಡಿದ್ದು, ಈ ಆದೇಶ ಜಾರಿ ಮಾಡುವಂತೆ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್‌ ಅವರಿಗೆ ಸೂಚಿಸಿದ್ದಾರೆ. 

ಯುವ ಕಾಂಗ್ರೆಸ್‌ನ ಜಿಲ್ಲಾ ಉಪಾಧ್ಯಕ್ಷ ಅರವಿಂದ್‌ ಕುಮಾರ್‌, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ್‌, ನಾಗಮಂಗಲ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶರತ್‌ ರಾಮಣ್ಣ, ಮಂಡ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಜಯ್ ಕುಮಾರ್‌, ಮಳವಳ್ಳಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಕೃಷ್ಣೇಗೌಡ, ಮಳವಳ್ಳಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮಹದೇವ ಪ್ರಸಾದ್‌ರನ್ನು ಉಚ್ಚಾಟನೆ ಮಾಡಲಾಗಿದೆ. ಈ ನಡುವೆ, ಶುಕ್ರವಾರವಷ್ಟೇ ಕಾಂಗ್ರೆಸ್‌ನ ಸಚ್ಚಿದಾನಂದ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದನ್ನು ಸ್ಮರಿಸಬಹುದು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!