ಸುಮಲತಾ ರ‍್ಯಾಲಿ ಯಲ್ಲಿ ಕಾಂಗ್ರೆಸ್ ಬಾವುಟ ಹಿಡಿದವರು ಅಂಬಿ ಅಭಿಮಾನಿಗಳು

By Web DeskFirst Published Mar 22, 2019, 11:11 AM IST
Highlights

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಿದ್ದು, ಅವರಿಗೆ ಕಾಂಗ್ರೆಸ್ ಬೆಂಬಲಿಸುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದ್ದಾರೆ. 

ಬೆಂಗಳೂರು: ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ನಾಮ ಪತ್ರ ಸಲ್ಲಿಕೆ ವೇಳೆ ಬೆಂಬಲಿಸಿದವರು ಅಂಬರೀಶ್ ಅಭಿಮಾನಿಗಳೇ ಹೊರತು ಕಾಂಗ್ರೆಸಿಗರಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ನಾಮಪತ್ರ ಸಲ್ಲಿಕೆ ವೇಳೆ ಯಾರೋ ಅಂಬರೀಶ್ ಅಭಿಮಾನಿಗಳು ವೈಯಕ್ತಿಕವಾಗಿ ಕಾಂಗ್ರೆಸ್ ಬಾವುಟ ಹಿಡಿದು ಹೋಗಿದ್ದಾರೆ ಎಂದರೆ ಕಾಂಗ್ರೆಸ್ ಬೆಂಬಲ ನೀಡಿದೆ ಎಂದಲ್ಲ. ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಯಾವ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೋ ಅವರಿಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ. 

ಅದೇ ಮೈತ್ರಿ ಧರ್ಮ, ಅದನ್ನೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದ ಮುಖಂಡರಿಗೆ ಸೂಚಿಸಿದ್ದಾರೆ ಎಂದರು. 

ಕಾಂಗ್ರೆಸ್ ಪಕ್ಷದ ಹತ್ತು ಹಾಲಿ ಸಂಸದರು, ಜೆಡಿಎಸ್‌ನ ಎರಡು ಹಾಲಿ ಸಂಸದರಿರುವ ಒಟ್ಟು 12 ಕ್ಷೇತ್ರಗಳನ್ನು ಆಯಾ ಪಕ್ಷಕ್ಕೆ ಬಿಡುವಂತೆ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೀಗ ಹಾಲಿ ಕಾಂಗ್ರೆಸ್ ಸಂಸದ ಇರುವ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಜನತಾದಳದ ವರಿಷ್ಠರು ಕೇಳುತ್ತಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

click me!