
ಮಂಡ್ಯ : ಮಂಡ್ಯ ಕಾಂಗ್ರೆಸ್ ಸಂಸದ ಶಮವರಾಮೇಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಕೆ. ಕಬ್ಬಾಳಯ್ಯ ಅವರು ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ದೂರು ದಾಖಲಿಸಿದ್ದಾರೆ.
ಕಾರ್ಯಕರ್ತರ ಸಭೆಯಲ್ಲಿ ನಾಯ್ಡು ಜನಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಜಾತಿನಿಂದನೆ ಮತ್ತು ಜಾತಿ-ಜಾತಿಗಳ ನಡುವೆ ಕೋಮುಗಲಭೆ ಸೃಷ್ಠಿಸುತ್ತಿರುವ ಆರೋಪ ಮಾಡಿದ್ದು, ಒಂದು ಜಾತಿಗೆ ಅವಮಾನ ಮಾಡಿ ಜಾತಿ ಜನಾಂಗಗಳ ನಡುವೆ ದ್ವೇಷ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಜಾತಿ ಸಂಘರ್ಷ ಉಂಟು ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಿರುತ್ತಾರೆ. ಮಂಡ್ಯ ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ, ನಾಗಮಂಗಲ ಪಟ್ಟಣ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಚಾ ರದ ವೇಳೆ ಮಂಡ್ಯ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅವರನ್ನು ಟೀಕಿಸುವ ಭರದಲ್ಲಿ ನಾಯ್ಡು/ ಬಲಿಜ ಸಮುದಾಯ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಸುಮಲತಾ ಗೌಡ್ತಿ ಅಲ್ಲ. ಅವರು ನಾಯ್ಡು. ಇಡೀ ಮಂಡ್ಯವನ್ನು ನಾಯ್ಡು ಮಯ ಮಾಡಲು ಹೊರಟಿದ್ದಾರೆ ಎಂದಿದ್ದರು.