ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ತೊರೆದ ಮುಖಂಡ ಇದೀಗ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ.
ಕಲಬುರಗಿ: ಲೋಕಸಭಾ ಚುನಾವಣಾ ಬಿನ್ನಲ್ಲೇ ಬಿಜೆಪಿ ಮುಖಂಡರೋರ್ವರು ರಾಜೀನಾಮೆ ನೀಡಿದ್ದು, ಇದೀಗ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ.
ಎರಡು ವಾರದ ಹಿಂದಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ, ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ.ಶಾಣಪ್ಪ ಸೋಮವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.
ಶನಿವಾರ ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್, ಡಾ.ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಶಾಣಪ್ಪ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...