‘ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಖಚಿತ : ಈ ಬಗ್ಗೆ ಸಂಶಯವಿಲ್ಲ’

Published : Apr 07, 2019, 11:25 AM IST
‘ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಖಚಿತ : ಈ ಬಗ್ಗೆ ಸಂಶಯವಿಲ್ಲ’

ಸಾರಾಂಶ

ಲೋಕಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಅಭ್ಯರ್ಥಿಗಳ ಪ್ರಚಾರ ಕಾರ್ಯ ಜೋರಾಗಿದೆ. ಇದೇ ಸಂದರ್ಭದಲ್ಲಿ ಸಿಎಂ ಕೂಡ ಬಿರುಸಿನ  ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಮಂಗಳೂರಿನಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಳಿದಿದ್ದಾರೆ.

ಮಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಕುಮಾರ ಸ್ವಾಮಿ ಮೈತ್ರಿ ಅಭ್ಯರ್ಥಿಗಳ ಪರ ಮಂಗಳೂರಿನಲ್ಲಿ ಪ್ರಚಾರ ಮಾಡಲಿದ್ದಾರೆ. 

ದಕ್ಷಿಣ ಕನ್ನಡ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಹಾಗೂ ಉಡುಪಿ-ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಪ್ರಚಾರಕ್ಕೆ ತೆರಳಿದ್ದು, ಈ ವೇಳೆ ಮಂಡ್ಯ ಕ್ಷೇತ್ರದ ಚುನಾವಣಾ ಕಾವಿನ ಬಗ್ಗೆ ಮಾತನಾಡಿದರು. 

ಮಂಡ್ಯ ಚುನಾವಣೆಯ ಬಗ್ಗೆ ಈಗಲೇ ನಾನೇನು ಮಾತನಾಡುವುದಲ್ಲ.  ಮೇ 23 ಕ್ಕೆ ಮಾತನಾಡುತ್ತೇನೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿನ ಬಗ್ಗೆ ತಮಗೆ ಯಾವುದೇ ರೀತಿಯ ಸಂಶಯವಿಲ್ಲ ಎಂದು ಹೇಳಿದ್ದಾರೆ. 

ಅಲ್ಲದೇ ಮಾಧ್ಯಮಗಳೇ ಈ ಬಗ್ಗೆ ಸಂಶಯಿಸುತ್ತಿದ್ದು, ಮಂಡ್ಯ ಜನರ ಮುಂದೆ ಇದ್ಯಾವುದು ನಡೆಯುದಿಲ್ಲ ಎಂದು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪುತ್ರನ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!