ಮತಗಟ್ಟೆಯಲ್ಲಿಯೇ ಚುನಾವಣಾ ಅಧಿಕಾರಿ ಸಾವು

Published : Apr 18, 2019, 11:04 AM ISTUpdated : Apr 18, 2019, 12:21 PM IST
ಮತಗಟ್ಟೆಯಲ್ಲಿಯೇ ಚುನಾವಣಾ ಅಧಿಕಾರಿ ಸಾವು

ಸಾರಾಂಶ

ಲೋಕಸಭಾ ಚುನಾವಣೆ ಸಮರ ರಾಜ್ಯದಲ್ಲಿ ಆರಂಭವಾಗಿದೆ. ಇತ್ತ ಚುನಾವಣಾ ಬೂತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯೋರ್ವರು ಅಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 

ಚಾಮರಾಜನಗರ : ಲೋಕಸಭಾ ಮಹಾ ಸಮರ ಆರಂಭವಾಗಿದೆ. ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಚಾಮರಾಜನಗರದಲ್ಲಿ ಚುನಾವಣಾ ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಯೋರ್ವರು ಮತಗಟ್ಟೆಯಲ್ಲಿಯೇ ಮೃತಪಟ್ಟಿದ್ದಾರೆ. 

"

ಷರೀಫ್ ಸರ್ಕಲ್ ಮತಗಟ್ಟೆಯಲ್ಲಿ ಹನೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಾಂತಮೂರ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಮರಾಜನಗರದ ಷರೀಫ್ ಸರ್ಕಲ್ ಮತಗಟ್ಟೆ ಸಂಖ್ಯೆ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕರ್ತವ್ಯ ನಿರ್ವಹಣೆ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಭೇಟಿ ನೀಡಿದ್ದಾರೆ. 

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!