ಏ.29ಕ್ಕೆ ಪ್ರಧಾನಿ ಮೋದಿ ಹೊಸಪೇಟೆಗೆ ಆಗಮನ; ಎಸ್‌ಪಿಜಿ ತಂಡದಿಂದ ಭದ್ರತೆ ಪರಿಶೀಲನೆ

By Kannadaprabha News  |  First Published Apr 25, 2024, 1:05 PM IST

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.29ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಬಹಿರಂಗ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ.


ಹೊಸಪೇಟೆ (ಏ.25): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.29ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಬಹಿರಂಗ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ.

ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಲೋಕಸಭಾ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಮತಯಾಚಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಐಜಿಪಿ ಲೋಕೇಶಕುಮಾರ್ ಹಾಗೂ ವಿಜಯನಗರ ಎಸ್ಪಿ ಶ್ರೀಹರಿಬಾಬು, ಎಎಸ್ಪಿ ಸಲೀಂ ಪಾಷಾ, ಡಿವೈಎಸ್ಪಿ ಶರಣಬಸವೇಶ್ವರ ಕ್ರೀಡಾಂಗಣಕ್ಕೆ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tap to resize

Latest Videos

ದೇಶದ ಸುರಕ್ಷತೆಗೆ ಮೋದಿ ಗೆಲ್ಲಿಸಿ: ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮನವಿ

ಪ್ರಧಾನಿ ಮೋದಿ ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಭದ್ರತಾ ಪರಿಶೀಲನೆಗಾಗಿ ಎಸ್‌ಪಿಜಿ ತಂಡ ಏ.25ರಂದು ನಗರಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿದೆ. ಈಗಾಗಲೇ ಪ್ರಾಥಮಿಕವಾಗಿ ಭದ್ರತಾ ಪರಿಶೀಲನೆ ನಡೆಸಲಾಗಿದೆ ಎಂದು ಎಸ್ಪಿ ಬಿ.ಎಲ್‌. ಶ್ರೀಹರಿಬಾಬು ಕನ್ನಡಪ್ರಭಕ್ಕೆ ತಿಳಿಸಿದರು.

ಹಿಂಬಾಗಿಲ ಮೂಲಕ ಕರ್ನಾಟಕದಲ್ಲಿ ಮುಸ್ಲಿಂರಿಗೆ ಮೀಸಲು: ಮೋದಿ ಕಿಡಿ

ಪ್ರಧಾನಿ ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಅವರ ಜೊತೆಗೆ ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕೂಡ ಆಗಮಿಸಲಿದ್ದಾರೆ. ಮೂವರು ಲೋಕಸಭಾ ಅಭ್ಯರ್ಥಿಗಳು ಹಾಗೂ ಜನಪ್ರತಿನಿಧಿಗಳು ಕೂಡ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್‌ ತಿಳಿಸಿದರು.

click me!