ಈ ಪಕ್ಷದಿಂದ ಶೇ.33 ಸ್ತ್ರೀಯರಿಗೆ ಲೋಕಸಭೆ ಟಿಕೆಟ್‌

Published : Mar 11, 2019, 01:43 PM IST
ಈ ಪಕ್ಷದಿಂದ ಶೇ.33 ಸ್ತ್ರೀಯರಿಗೆ ಲೋಕಸಭೆ ಟಿಕೆಟ್‌

ಸಾರಾಂಶ

ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೇ ವೇಳೆ ಈ ಪಕ್ಷದಲ್ಲಿ ಶೇ.33ರಷ್ಟು ಮಹಿಳೆಯರಿಗೆ ಲೋಕಸಭಾ ಟಿಕೆಟ್ ನೀಡುವುದಾಗಿ ಹೇಳಿದೆ. 

ಭುವನೇಶ್ವರ :  ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ತಮ್ಮ ಬಿಜೆಡಿ ಪಕ್ಷ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಶೇ.33ರಷ್ಟುಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿರಿಸಲಿದೆ ಎಂದು ಪ್ರಕಟಿಸಿದ್ದಾರೆ. ಅದರ ಪ್ರಕಾರ, ಒಡಿಶಾದ 21 ಲೋಕಸಭಾ ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳ ಟಿಕೆಟ್‌ಗಳನ್ನು ಮಹಿಳೆಯರಿಗೆ ನೀಡಬೇಕಾಗುತ್ತದೆ.

ಭಾನುವಾರ ಕೇಂದ್ರಪಾರದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಬಿಜು ಜನತಾದಳದ ಅಧ್ಯಕ್ಷರೂ ಆಗಿರುವ ನವೀನ್‌ ಪಟ್ನಾಯಕ್‌ ಈ ಘೋಷಣೆ ಮಾಡಿದರು. ಆದರೆ, ಲೋಕಸಭೆ ಚುನಾವಣೆಯ ಜೊತೆಯಲ್ಲೇ ನಡೆಯಲಿರುವ ಒಡಿಶಾ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಮೀಸಲು ಜಾರಿಗೊಳಿಸುವ ಬಗ್ಗೆ ಅವರು ಏನನ್ನೂ ಹೇಳಲಿಲ್ಲ. 

ರಾಜ್ಯದ 147 ವಿಧಾನಸಭೆ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಮಹಿಳಾ ಸದಸ್ಯರಿದ್ದಾರೆ. ಕಳೆದ ನವೆಂಬರ್‌ನಲ್ಲಿ ಒಡಿಶಾ ವಿಧಾನಸಭೆಯಲ್ಲಿ ಮಹಿಳೆಯರಿಗೆ ವಿಧಾನಸಭೆ ಹಾಗೂ ಸಂಸತ್‌ ಚುನಾವಣೆಯಲ್ಲಿ ಶೇ.33ರಷ್ಟುಮೀಸಲು ನೀಡುವ ಮಸೂದೆ ಸರ್ವಾನುಮತದಿಂದ ಅಂಗೀಕಾರಗೊಂಡಿತ್ತು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!