ತುಮಕೂರು JDS : ಪಕ್ಷೇತರ ಸ್ಪರ್ಧೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಮುಖಂಡ

Published : Mar 15, 2019, 10:02 AM IST
ತುಮಕೂರು JDS : ಪಕ್ಷೇತರ ಸ್ಪರ್ಧೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಮುಖಂಡ

ಸಾರಾಂಶ

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸುತ್ತಿದ್ದು, ತುಮಕೂರನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟರೆ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಎಚ್ಚರಿಕೆ ನೀಡಿದ್ದಾರೆ. 

ತುಮಕೂರು: ಜೆಡಿಎಸ್‌ಗೆ 8, 12, 18 ಕ್ಷೇತ್ರ ಬಿಟ್ಟು ಕೊಟ್ಟರೂ ಅವರು ಗೆಲ್ಲೋದು ಕೇವಲ 2 ರಿಂದ 3 ಸೀಟು ಮಾತ್ರ ಎಂದು ಭವಿಷ್ಯ ಹೇಳಿರುವ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣ, ಒಂದು ವೇಳೆ 3 ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ತಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ಶಪಥ ಮಾಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ, ಹಾಸನಗಳಲ್ಲೂ ಜೆಡಿಎಸ್‌ಗೆ ಗೆಲುವು ಸುಲಭವಿಲ್ಲ ಎಂದರು. ತುಮಕೂರಿನ ಸೀಟು ಹಂಚಿಕೆ ವಿಚಾರ ಮಾ. 16 ರಂದು ಅಂತಿಮವಾಗಲಿದೆ. 

ಒಂದು ವೇಳೆ ತುಮಕೂರಿನಲ್ಲಿ ಜೆಡಿಎಸ್‌ಗೆ ಟಿಕೆಟ್ ಕೊಟ್ಟರೆ ಪಕ್ಷೇತರನಾಗಿ ಸ್ಪರ್ಧಿಸುವೆ. ಹಾಸನ, ಮಂಡ್ಯ, ಬೆಂಗಳೂರಿನ ರಾಜಕೀಯ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದು, ನಾವೆಲ್ಲರೂ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!