ದಿಢೀರ್ ಬೆಳವಣಿಗೆ: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಮಾಜಿ ಸಿಎಂ

By Web DeskFirst Published May 26, 2019, 10:01 PM IST
Highlights

ಲೋಕಸಭಾ ಚುನಾವಣೆ ಸೋಲಿನ ನಂತರ ಒಬ್ಬಬ್ಬರಾಗಿ ಕಾಂಗ್ರೆಸ್ ನಾಯಕರು ಸ್ಥಾನ ತ್ಯಜಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಹ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದರು.

ಮುಂಬೈ[ಮೇ. 26]  ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಚುನಾವಣೆ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂಧು ತಿಳಿಸಿದರು. 

ಅಂದು ಇನ್ಸ್ ಪೆಕ್ಟರ್, ಇಂದು ಸಂಸದ, ಸೆಲ್ಯೂಟ್ ಮಾತ್ರ ಬದಲಾಗಿಲ್ಲ!

ಮಹಾರಾಷ್ಟ್ರದಲ್ಲಿಯೂ ಕಾಂಗ್ರೆಸ್ ಧೂಳಿಪಟವಾಗಿತ್ತು. ಕಾಂಗ್ರೆಸ್‌ – ಎನ್‌ಸಿಪಿ ಮೈತ್ರಿ  ಮಾಡಿಕೊಂಡು ಚುನಾವಣೆ ಎದುರಿಸಿತ್ತು. 2014ರಲ್ಲಿ ನಡೆದ ಚುನಾವಣೆಯಲ್ಲಿ  2 ಸ್ಥಾನ ಪಡೆದಿದ್ದ ಕಾಂಗ್ರೆಸ್ ಈ ಬಾರಿ ಒಂದೇ  ಒಂದು ಸ್ಥಾನ ಪಡೆದುಕೊಂಡಿತು. ಅಶೋಕ್‌ ಚವಾಣ್‌ ಅವರು ನಾಂದೇಡ್‌ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು.

 

click me!