ಬಿಜೆಪಿಯ 10 ಹಾಲಿ ಸಂಸದರಿಗೆ ಟಿಕೆಟ್‌ ಕಟ್‌

By Web DeskFirst Published Mar 20, 2019, 11:12 AM IST
Highlights

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಟಿಕೆಟ್ ನೀಡುವ ವಿಚಾರವೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ ಬಿಜೆಪಿ 10 ಸಂಸದರಿಗೆ ಈ ರಾಜ್ಯದಲ್ಲಿ ಟಿಕೆಟ್ ಕಟ್ ಮಾಡಲಾಗಿದೆ. 

ನವದೆಹಲಿ: ಇತ್ತೀಚೆಗಷ್ಟೇ ನಡೆದ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಎದುರು ಸೋತು ಸುಣ್ಣವಾಗಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್‌, ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 10 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ. 

ಅದರ ಬದಲು ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ಬಿಜೆಪಿ ಘೋಷಣೆ ಮಾಡಿದೆ. 

ಈ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಮುಖಂಡರನ್ನೊಳಗೊಂಡ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿಯು ಮಂಗಳವಾರ ಸಭೆ ನಡೆಸಿತು. ಈ ಸಭೆ ಬಳಿಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್‌ ಜೈನ್‌ ಅವರು ಈ ಘೋಷಣೆ ಮಾಡಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

click me!