‘ದೇಶದಲ್ಲಿ ಬಿಜೆಪಿ 300 ಸ್ಥಾನ ಗೆಲ್ಲಲು ಆಶಿರ್ವಾದ ದೊರಕಿದೆ’

Published : Apr 14, 2019, 12:55 PM IST
‘ದೇಶದಲ್ಲಿ ಬಿಜೆಪಿ 300 ಸ್ಥಾನ  ಗೆಲ್ಲಲು ಆಶಿರ್ವಾದ ದೊರಕಿದೆ’

ಸಾರಾಂಶ

ಈಗಾಗಲೇ ದೇಶದಲ್ಲಿ ಮಹಾ ಸಮರವಾದ ಲೋಕಸಭಾ ಚುನಾವಣಾ ಪರ್ವ ಆರಂಭವಾಗಿದೆ. ಇದೇ ವೇಳೆ ದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಪಾಲಾಗಲಿವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಚಾಮರಾಜನಗರ : ಲೋಕಸಭಾ ಚುನಾವಣೆಗೆ ರಾಜ್ಯ ಸಜ್ಜಾಗಿದೆ. ಇದೇ ವೇಳೆ  ವಿವಿಧ ಪಕ್ಷಗಳ ನಾಯಕರು ಬಿರುಸಿನ  ಪ್ರಚಾರದಲ್ಲಿ ತೊಡಗಿದ್ದಾರೆ. 

ಇತ್ತ ಬಿಜೆಪಿ ನಾಯಕ ಈಶ್ವರಪ್ಪ ಬಿಜೆಪಿ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ.  ಚಾಮರಾಜನಗರದಲ್ಲಿ ಮಲೆಮಹದೇಶ್ವರ ಸ್ವಾಮಿ ದರ್ಶನ ಮಾಡಿ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ. 

ಬಳಿಕ ಇಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮತನಾಡಿದ ಅವರು  ಬಿಜೆಪಿ 300ಕ್ಕೂ ಹೆಚ್ಚು ಸ್ಥಾನ ಗೆಲ್ಲುವಂತೆ ಮಲೆ ಮಹದೇಶ್ವರರಲ್ಲಿ ಪ್ರಾರ್ಥನೆ ಮಾಡಿದ್ದೇನೆ.  ಒಳ್ಳೆಯ ಪ್ರಸಾದ ಕೂಡ ಮಾದಪ್ಪನಿಂದ ದೊರಕಿದೆ ಎಂದರು. 

ಇನ್ನು ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವುದಕ್ಕಾಗಿ  150 ಕೋಟಿ ವೆಚ್ಚ ಮಾಡುತ್ತಿದ್ದಾರೆ. ಪ್ರತೀ ಬೂತ್ ಗೆ 5 ಲಕ್ಷ ಕೊಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣಾ ವೆಚ್ಚವನ್ನು ಸ್ಥಳೀಯ ಗುತ್ತಿಗೆದಾರರು ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗವು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. 

ಅಲ್ಲದೇ ಜೆಡಿಎಸ್ ಎಷ್ಟು ಹಣ ಖರ್ಚು ಮಾಡಿದರೂ ಕೂಡ ಮಂಡ್ಯದಲ್ಲಿ ಗೆಲ್ಲುವುದು ಸುಮಲತಾ ಎಂದು ಭವಿಷ್ಯ ನುಡಿದಿದ್ದಾರೆ. 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!